ಶಿರಸಿಯಲ್ಲಿ ಅಕ್ರಮ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ- ನಾಲ್ವರ ಬಂಧನ

ಕಾರವಾರ: ಮನೆಯೊಂದರಲ್ಲಿ ಅಕ್ರಮ ವೇಶ್ಯವಾಟಿಕೆ ದಂಧೆ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿ, ಇಬ್ಬರು ಸಂತ್ರಸ್ತೆಯರನ್ನು ರಕ್ಷಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಮರಾಠಿಕೊಪ್ಪದಲ್ಲಿ ಘಟನೆ ನಡೆದಿದ್ದು, ಶಿರಸಿಯ ಮರಾಠಿಕೊಪ್ಪದ ಸಾವಿತ್ರಿ ಶಂಕರ ಭಟ್ (56), ಇಲ್ಲಿನ ಅಗಸೆಬಾಗಿಲಿನ ರಾಮಚಂದ್ರ ಗಜಾನನ ನಾಯ್ಕ (59), ಹೊನ್ನಾವರದ ಲಕ್ಷ್ಮೀಕಾಂತ ನಾಯ್ಕ(22) ಹಾಗೂ ಹುಬ್ಬಳ್ಳಿಯ ಆನಂದ ರೋಣಿಮಠ (57) ಬಂಧಿತ ಆರೋಪಿಗಳು. ಇವರಿಂದ 2,850 ರೂ. ನಗದು ಮತ್ತು 4 ಮೊಬೈಲ್ ಗಳನ್ನು ಜಪ್ತಿ ಮಾಡಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸಾವಿತ್ರಿ ಭಟ್ ಹಾಗೂ ರಾಮಚಂದ್ರ ನಾಯ್ಕ ಹಣ ಗಳಿಸುವ ಉದ್ದೇಶದಿಂದ ಒತ್ತಾಯ ಪೂರ್ವಕವಾಗಿ ಇಬ್ಬರು ಮಹಿಳೆಯರನ್ನು ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದರು ಎನ್ನಲಾಗಿದೆ. ಪೊಲೀಸರು ದಾಳಿ ನಡೆಸಿ ಸಂತ್ರಸ್ತೆಯರನ್ನು ರಕ್ಷಿಸಿದ್ದಾರೆ. ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ 28/2020 ಕಲಂ 3,4,5,7 ಅನೈತಿಕ ವ್ಯವಹಾರ ನಿಷೇಧ ಅಧಿನಿಯಮ 1956 ಮತ್ತು ಐಪಿಸಿ ಸೆಕ್ಷನ್ 370, 109 ಅಡಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *