ನವದೆಹಲಿ: ಆಹಾರ, ಔಷಧಿ ಸೇರಿದಂತೆ ಇತರೆ ಅಗತ್ಯ ವಸ್ತುಗಳು ದೇಶದಲ್ಲಿ ಸಾಕಷ್ಟಿದ್ದು, ಯಾರು ಹೆದರುವ ಅಗತ್ಯವಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಮೇ 3ರ ವರೆಗೆ ದೇಶಾದ್ಯಂತ ಲಾಕ್ಡೌನ್ ವಿಸ್ತರಣೆ ಮಾಡಿದ ಬೆನ್ನಲ್ಲೇ ಸರಣಿ ಟ್ವೀಟ್ ಮಾಡಿ ಜನ ಕೇಳುತ್ತಿದ್ದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
इस लड़ाई में महत्वपूर्ण भूमिका निभा रहे हमारे डॉक्टर, स्वास्थ्यकर्मी, सफाई कर्मचारी, पुलिसबल व सभी सुरक्षाकर्मियों का योगदान दिल को छू लेने वाला है। इस विषम परिस्थिति में आपका यह साहस और समझदारी हर भारतवासी को प्रेरित करती है। सभी लोग दिशानिर्देशों का पालन कर इनका सहयोग करें।
— Amit Shah (@AmitShah) April 14, 2020
ಗೃಹ ಸಚಿವನಾಗಿ ಔಷಧಿ, ಆಹಾರ ಸೇರಿದಂತೆ ಇನ್ನಿತರ ಅಗತ್ಯ ವಸ್ತುಗಳು ದೇಶದಲ್ಲಿ ಬೇಕಾದಷ್ಟಿದೆ ಎಂದು ದೇಶದ ಪ್ರಜೆಗಳಿಗೆ ಭರವಸೆ ನೀಡುತ್ತಿದ್ದೇನೆ. ಯಾರೂ ಈ ಬಗ್ಗೆ ಚಿಂತಿಸಬೇಕಿಲ್ಲ. ಶ್ರೀಮಂತರು ಬಡವರಿಗೆ ಸಹಾಯ ಮಾಡುವಂತೆ ಕೇಳಿಕೊಳ್ಳುತ್ತೇನೆ ಎಂದು ಮನವಿ ಮಾಡಿದ್ದಾರೆ.
ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರದ ಜೊತೆ ರಾಜ್ಯಗಳು ಕೈ ಜೋಡಿಸಿದ್ದು ಸಹಕಾರ ನೀಡುತ್ತಿವೆ. ಘೋಷಣೆಯಾಗಿರುವ ಲಾಕ್ಡೌನ್ ಪಾಲಿಸಬೇಕು ಎಂದು ಅವರು ಕೇಳಿಕೊಂಡಿದ್ದಾರೆ.
सभी प्रदेश सरकारें जिस प्रकार केंद्र सरकार के साथ मिलकर कार्य कर रहीं हैं वह सचमुच प्रशंसनीय है। अब हमें इस समन्वय को और अधिक प्रगाढ़ करना है जिससे सभी नागरिक लॉकडाउन का अच्छे से पालन करें और किसी भी नागरिक को जरुरत की चीज़ों की समस्या भी ना हो।
— Amit Shah (@AmitShah) April 14, 2020
ವೈದ್ಯರು, ವೈದ್ಯಕೀಯ ಸಿಬ್ಬಂದಿ, ಸ್ಯಾನಿಟೈಸೇಷನ್ ಸಿಬ್ಬಂದಿ, ಪೊಲೀಸರು ಹಾಗೂ ಎಲ್ಲಾ ಭದ್ರತಾ ಸಿಬ್ಬಂದಿಗಳು ಕೊಡುಗೆ ಮಹತ್ತರವಾದದ್ದು. ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಅವರ ಕೆಲಸ ನಮಗೆಲ್ಲ ಪ್ರೇರಣೆಯಾಗಬೇಕು. ಎಲ್ಲರೂ ನಿಯಮವನ್ನು ಪಾಲಿಸಿ ಇವರ ಕೆಲಸಕ್ಕೆ ಸಹಕರಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.
आज प्रधानमंत्री @narendramodi जी द्वारा COVID-19 को फैलने से रोकने व इसको समाप्त करने के लिए देशभर में किये गए लॉकडाउन को 03 मई तक बढाने का निर्णय भारत और भारतवासियों के जीवन और उनकी रक्षा के लिए लिया गया निर्णय है। इसके लिए मैं प्रधानमंत्री जी का हृदय से आभार व्यक्त करता हूँ।
— Amit Shah (@AmitShah) April 14, 2020

Leave a Reply