ಉದ್ರಿಕ್ತ ಗುಂಪಿನ ವಿರುದ್ಧ ಮುಲಾಜಿಲ್ಲದೆ ಕಠಿಣ ಕಾನೂನು ಅಸ್ತ್ರ ಪ್ರಯೋಗಿಸಿ: ಹೆಚ್‍ಡಿಕೆ

ಬೆಂಗಳೂರು: ಪಾದರಾಯನಪುರಲ್ಲಿ ಗಲಾಟೆ ನಡೆಸಿದ ಉದ್ರಿಕ್ತ ಗುಂಪಿನ ವಿರುದ್ಧ ಕಠಿಣ ಕಾನೂನು ಅಸ್ತ ಪ್ರಯೋಗಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಪಾದರಾಯನಪುರ ಗಲಾಟೆ ಬಗ್ಗೆ ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಟ್ವೀಟ್: ಬೆಂಗಳೂರಿನ ಪಾದರಾಯನಪುರದಲ್ಲಿ ಕೊರೊನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಕಳುಹಿಸಲು ಮುಂದಾಗಿದ್ದ ಪೊಲೀಸರು, ವೈದ್ಯಕೀಯ, ಬಿಬಿಎಂಪಿ ಸಿಬ್ಬಂದಿಗಳ ಮೇಲೆ ಉದ್ರಿಕ್ತ ಗುಂಪು ಹಲ್ಲೆ ನಡೆಸಿರುವುದು ಖಂಡನೀಯ. ಮುಲಾಜಿಲ್ಲದೆ ಅಂಥವರ ವಿರುದ್ಧ ಕಠಿಣ ಕಾನೂನು ಅಸ್ತ್ರ ಪ್ರಯೋಗಿಸಬೇಕು.

ದೇಶದ ಕಾನೂನಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುವವರನ್ನು ಮುಲಾಜಿಲ್ಲದೆ ‘ಬಲಿ’ ಹಾಕಬೇಕು. ಇಡೀ ಜಗತ್ತು ಎದುರಿಸುತ್ತಿರುವ ಕೊರೊನಾ ವೈರಸ್ ವಿರುದ್ಧ ಜನತೆ ಸಂಘರ್ಷ ಮಾಡುತ್ತಿದ್ದಾರೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಧರ್ಮದ ಗುರಾಣಿಯನ್ನು ಅಡ್ಡ ತಂದು ವ್ಯವಸ್ಥೆ ಬುಡಮೇಲು ಮಾಡುವುದನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ. ಪೊಲೀಸರು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಆಡಳಿತ ವ್ಯವಸ್ಥೆಯ ನೈತಿಕ ಬಲ ಕುಗ್ಗಿಸುವ ಮತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಮಾಡಿ ದಂಗೆ ಏಳುವವರರ ಹೆಡೆಮುರಿ ಕಟ್ಟಬೇಕು.

Comments

Leave a Reply

Your email address will not be published. Required fields are marked *