ಕೋವಿಡ್ ಟೆಸ್ಟಿಂಗ್ ಲ್ಯಾಬ್‍ನಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಕಿರುಕುಳ

ಧಾರವಾಡ: ಕೋವಿಡ್ ಟೆಸ್ಟಿಂಗ್ ಲ್ಯಾಬ್‍ನಲ್ಲಿ ಮಹಿಳಾ ಸಿಬ್ಬಂದಿಯ ಮೇಲೆ ಕಿರುಕುಳ ನಡೆದಿರುವ ಆರೋಪ ಕೇಳಿ ಬಂದಿದೆ.

ಧಾರವಾಡದ ಡಿಮ್ಹಾನ್ಸ್ ನಲ್ಲಿರುವ ಕೋವಿಡ್ ಟೆಸ್ಟಿಂಗ್ ಲ್ಯಾಬ್‍ನ ಮಹಿಳಾ ಸಿಬ್ಬಂದಿಯೊಬ್ಬರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕನಾಗಿರುವ ತಂತ್ರಜ್ಞನ ಮೇಲೆ ಈ ಆರೋಪ ಮಾಡಿದ್ದಾರೆ. ಕರ್ನಾಟಕ ವಿವಿಯ ಈ ಪ್ರಾಧ್ಯಾಪಕರನ್ನು ಡಿಮ್ಹಾನ್ಸ್ ನಲ್ಲಿರುವ ಕೋವಿಡ್ ಲ್ಯಾಬ್‍ಗೆ ಕಳೆದ 15 ದಿನಗಳಿಂದ ಅಧಿಕಾರಿಯನ್ನಾಗಿ ನಿಯೋಜನೆ ಮಾಡಲಾಗಿತ್ತು.

ಈ ಹಿನ್ನೆಲೆ ಇಬ್ಬರು ಇದೇ ಲ್ಯಾಬ್‍ನಲ್ಲಿ ಕೆಲಸ ಮಾಡುವ ವೇಳೆ ನನಗೆ ಮಾನಸಿಕ ಕಿರುಕುಳ ನೀಡಲಾಗಿದೆ ಎಂದು ಪ್ರಾಧ್ಯಾಪಕನ ಮೇಲೆ ಮಹಿಳೆ ಆರೋಪ ಮಾಡಿದ್ದಾರೆ. ಈ ಸಂಬಂಧ ಡಿಮ್ಹಾನ್ಸ್ ನಿರ್ದೇಶಕ ಮತ್ತು ಕರ್ನಾಟಕ ವಿವಿ ಕುಲಪತಿಗೆ ದೂರು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ಡಿಮ್ಹಾನ್ಸ್ ನಿರ್ದೇಶಕರಿಂದ ಕಮಿಟಿ ರಚನೆ ಮಾಡಲಾಗಿದ್ದು, ಪ್ರಾಥಮಿಕ ಹಂತದ ವಿಚಾರಣೆ ಪೂರ್ಣಗೊಳಿಸಿರುವ ಕಮಿಟಿ, ಪ್ರಕರಣ ಕುರಿತು ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಲಿದೆ.

Comments

Leave a Reply

Your email address will not be published. Required fields are marked *