ಒಂದು ತಿಂಗ್ಳ ಅಂತರದಲ್ಲಿ ಒಂದೇ ಕಾಲೇಜಿನ ಇಬ್ಬರು ಉಪನ್ಯಾಸಕರು ಆತ್ಮಹತ್ಯೆ

ಮಂಡ್ಯ: ಒಂದು ತಿಂಗಳ ಅಂತರದಲ್ಲಿ ಒಂದೇ ಕಾಲೇಜಿನ ಇಬ್ಬರು ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ.

ಮಳವಳ್ಳಿ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಾಣಿಜ್ಯ ವಿಭಾಗದ ಉಪನ್ಯಾಸಕಿ ಕೋಕಿಲ (35) ಮತ್ತು ಇತಿಹಾಸ ಉಪನ್ಯಾಸಕ ಸುರೇಶ್ (29) ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿರಬಹುದು ಎನ್ನಲಾಗಿದೆ. ಮೇ 11ರಂದು ಕೋಕಿಲ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇನ್ನೂ ಜೂನ್ 4 ರಂದು ಸುರೇಶ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿದ್ದಾರೆ.

ಸರ್ಕಾರಿ ಕೆಲಸ ಸಿಕ್ಕಿಲ್ಲ ಜೊತೆಗೆ ಲಾಕ್‍ಡೌನ್‍ನಿಂದ ಎದುರಾದ ಆರ್ಥಿಕ ಸಂಕಷ್ಟದಿಂದ ಇಬ್ಬರು ಉಪನ್ಯಾಸಕರು ಖಿನ್ನತೆಗೆ ಒಳಗಾಗಿದ್ದರು. ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆಪ್ತ ವಲಯದಿಂದ ತಿಳಿದುಬಂದಿದೆ.

ಈ ಘಟನೆ ಮಳವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Comments

Leave a Reply

Your email address will not be published. Required fields are marked *