ದೇಶದಲ್ಲಿ ಸೋಂಕಿತರ ಸಂಖ್ಯೆ 4.10 ಲಕ್ಷಕ್ಕೆ ಏರಿಕೆ – 24 ಗಂಟೆಯಲ್ಲಿ 15,413 ಮಂದಿಗೆ ಕೊರೊನಾ

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ದಿನೇ ದಿನೇ ತನ್ನ ಅಟ್ಟಹಾಸವನ್ನು ಮುಂದರಿಸಿದೆ. ಕಳೆದ 24 ಗಂಟೆಗಳಲ್ಲಿ 15,413 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

24 ಗಂಟೆಯಲ್ಲಿ 15 ಸಾವಿರಕ್ಕೂ ಮಂದಿಗೆ ಕೊರೊನಾ ಸೋಂಕು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4,10,461ಕ್ಕೆ ಏರಿಕೆ ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ಕೊರೊನಾಗೆ 306 ಜನರು ಸಾವನ್ನಪ್ಪಿದ್ದು, ಕೊರೊನಾಗೆ ಬಲಿಯಾದವರ ಸಂಖ್ಯೆ 13,254ಕ್ಕೆ ಏರಿಕೆಯಾಗಿದೆ. ಅದರಲ್ಲೂ ಜೂನ್ ತಿಂಗಳಲ್ಲೇ 2 ಲಕ್ಷಕ್ಕೂ ಅಧಿಕ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

4,10,461 ಪೈಕಿ 2,27,755 ಲಕ್ಷ ಜನರು ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇನ್ನೂ 1,69,451 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

ದೇಶದ ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಮಹಾರಾಷ್ಟ್ರದಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿದ್ದು, ಈವರೆಗೂ 1,28,205 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ದೆಹಲಿಯಲ್ಲಿ 56,746 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ವರದಿಯಾಗಿದೆ.

Comments

Leave a Reply

Your email address will not be published. Required fields are marked *