ಕಳೆದ 24 ಗಂಟೆಯಲ್ಲಿ ದೇಶದ 17,296 ಮಂದಿಗೆ ಕೊರೊನಾ- 407 ಜನ ಸಾವು

– 5 ಲಕ್ಷ ಸೋಂಕಿತರ ಗಡಿ ತಲುಪಿದ ಭಾರತ

ನವದೆಹಲಿ: ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಉಲ್ಬಣಗೊಳ್ಳುತ್ತಿದೆ. ಕೇಂದ್ರ ಸರ್ಕಾರವು ಇಂದು ಬಿಡುಗಡೆ ಮಾಡಿದ ಕೋವಿಡ್-19 ಸೋಂಕಿತರ ಸಂಖ್ಯೆ ಹೊಸ ದಾಖಲೆಯನ್ನು ಬರೆದಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ ನೋಡಿದರೆ ಶನಿವಾರದ ವೇಳೆಗೆ ರೋಗಿಗಳ ಸಂಖ್ಯೆ 5 ಲಕ್ಷ ಗಡಿ ದಾಟುವ ಸಾಧ್ಯತೆ ಸಜ್ಜಾಗಿದೆ. ಚೀನಾದ ವುಹಾನ್‍ನಲ್ಲಿ ಸಾಂಕ್ರಾಮಿಕ ರೋಗ ಹರಡಿದ ಆರು ತಿಂಗಳ ಕಳೆದರೂ ವಿಶ್ವ ಆರೋಗ್ಯ ಸಂಸ್ಥೆ ಅಥವಾ ಯಾವುದೇ ದೇಶಗಳಿಂದ ಮಾರಕ ವೈರಸ್‍ಗೆ ಲಸಿಕೆ ಕಂಡುಹಿಡಿಯಲು ಸಾಧ್ಯವಾಗಲಿಲ್ಲ. ಹೀಗಾಗಿ ಕೋವಿಡ್-19 ಹೆಚ್ಚು ಹೆಚ್ಚು ಜನರಿಗೆ ತಗುಲುತ್ತಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಬುಲೆಟಿನ್ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 17,296 ಮಂದಿಗೆ ಸೋಂಕು ದೃಢಪಟ್ಟಿದ್ದು, 407 ಮೃತಪಟ್ಟಿದ್ದಾರೆ. ಹೀಗಾಗಿ ಶನಿವಾರದ ವೇಳೆಗೆ ಸೋಂಕಿತರ ಸಂಖ್ಯೆ 5 ಲಕ್ಷದ ಗಡಿ ದಾಟಬಹುದು ಎಂದು ಹೇಳಲಾಗುತ್ತಿದೆ.

“ದೇಶದಲ್ಲಿ ಈವರೆಗೆ ಒಟ್ಟು 4,90,401 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಪೈಕಿ 1,89,463 ಜನರು ಚಿಕಿತ್ಸೆ ಪಡೆಯುತ್ತಿದ್ದರೆ, 2,85,637 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 15,301 ಜನ ಹೆಮ್ಮಾರಿಗೆ ಬಲಿಯಾಗಿದ್ದಾರೆ” ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

Comments

Leave a Reply

Your email address will not be published. Required fields are marked *