ಮಂಗಳವಾರದಿಂದ ಒಂದು ವಾರ ಲಾಕ್‍ಡೌನ್- ರಾಜ್ಯ ಸರ್ಕಾರದಿಂದ ಅಧಿಕೃತ ಘೋಷಣೆ

ಬೆಂಗಳೂರು: ಕೊರೊನಾ ತಡೆಗಾಗಿ ಬೆಂಗಳೂರು ಮತ್ತು ಗ್ರಾಮಾಂತರ ಭಾಗದಲ್ಲಿ ಒಂದು ವಾರ ಲಾಕ್‍ಡೌನ್ ಮಾಡಲು ಸರ್ಕಾರ ನಿರ್ಧರಿಸಿ ಅಧಿಕೃತ ಘೋಷಣೆ ಮಾಡಿದೆ.

ರಾಜ್ಯದಲ್ಲಿ ದಿನೇ ದಿನೇ ಭಾರಿ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಮೇರೆಗೆ 14.07.2020ರ ಮಂಗಳವಾರ ರಾತ್ರಿ 8.00 ಗಂಟೆಯಿಂದ 1 ವಾರಗಳ ಕಾಲ ಅಂದರೆ 23.07.2020 ರ ಬೆಳಗ್ಗೆ 5.00 ಗಂಟೆಯವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗಿದೆ.

ಈ ಅವಧಿಯಲ್ಲಿ ಎಂದಿನಂತೆ ಆಸ್ಪತ್ರೆಗಳು, ದಿನಸಿ, ಹಾಲು, ಹಣ್ಣು, ತರಕಾರಿ, ಔಷಧಿ ಮೊದಲಾದ ದಿನಬಳಕೆಯ ಅಗತ್ಯ ವಸ್ತುಗಳು ಲಭ್ಯವಿರುತ್ತವೆ. ಇದರ ಜೊತೆ ಈಗಾಗಲೇ ನಿಗದಿಯಾಗಿರುವ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ನಡೆಯಲಿವೆ.

ದಿನಬಳಕೆ ವಸ್ತುಗಳ ಖರೀದಿಗೆ ತೆರಳುವಾಗ ಸಾಮಾಜಿಕ ಅಂತರ ಪಾಲಿಸಿ, ಮಾಸ್ಕ್ ಧರಿಸಿ, ಸರ್ಕಾರ ಹೊರಡಿಸುವ ಲಾಕ್‍ಡೌನ್ ಸಂಬಂಧಿತ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಬೇಕು. ತಾವು ಲಾಕ್‍ಡೌನ್ ಸಂಧರ್ಬದಲ್ಲಿ ಮನೆಯಲ್ಲೇ ಇರುವ ಮೂಲಕ ಕೋವಿಡ್-19ರ ನಿಯಂತ್ರಣಕ್ಕೆ ಕೈ ಜೋಡಿಸಿ ಎಂದು ಸರ್ಕಾರ ಮನವಿ ಮಾಡಿಕೊಂಡಿದೆ.

Comments

Leave a Reply

Your email address will not be published. Required fields are marked *