ನವದೆಹಲಿ: ಕೇಂದ್ರ ಸಚಿವರ ಭೇಟಿ ಹಿನ್ನೆಲೆಯಲ್ಲಿ ಸಿಎಂ ಬಿಎಸ್ವೈ ಅನುಮತಿ ಪಡೆದೇ ದೆಹಲಿಗೆ ಆಗಮಿಸಿದ್ದೇನೆ. ಯಾವುದೇ ರಾಜಕೀಯ ಚಟುವಟಿಕೆಗಳನ್ನು ನಡೆಸಿಲ್ಲ. ಹಿರಿಯ ನಾಯಕರನ್ನು ಭೇಟಿ ಮಾಡಿಲ್ಲ ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದ್ದಾರೆ.
ಸರ್ಕಾರಕ್ಕೆ ಒಂದು ವರ್ಷ ಪೂರ್ಣವಾದ ಹಿನ್ನೆಲೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆಗೆ ಸಂಬಂಧಿಸಿದ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದರು. ನಾನು ರಾಜ್ಯಪಾಲರ ಭೇಟಿಗೆ ದೆಹಲಿಗೆ ಆಗಮಿಸಿದ್ದು ನಿಜ. ರಾಜ್ಯಪಾಲರ ಆರೋಗ್ಯ ವಿಚಾರಿಸಲು ಅವರನ್ನು ಭೇಟಿ ಮಾಡಿದ್ದೆ. ಇತ್ತೀಚೆಗೆ ಅವರಿಗೆ ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆ ನಡೆದಿತ್ತು. ಹೀಗಾಗಿ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದು ಹೊರತು ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ ಎಂದರು.
ರಾಜ್ಯಸರ್ಕಾರಕ್ಕೆ 1 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಸರ್ಕಾರದ ಪ್ರಗತಿ ವರದಿಯನ್ನು ಜನರ ಮುಂದಿಡಲು ಸನ್ಮಾನ್ಯ ಮುಖ್ಯಮಂತ್ರಿ ಶ್ರೀ @BSYBJP ರವರ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಸಮಾರಂಭ ನಡೆಯಿತು. ಜಿಲ್ಲಾ ಕೇಂದ್ರಗಳಿಂದ ಸಚಿವರು, ಅಧಿಕಾರಿಗಳು, ಸಾರ್ವಜನಿಕರು ಆನ್ ಲೈನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. (1/2) pic.twitter.com/glvtO9AFJi
— CM of Karnataka (@CMofKarnataka) July 27, 2020
ರಾಜ್ಯಪಾಲರ ಜೊತೆಗಿನ ಅರ್ಧ ಗಂಟೆಯ ಮಾತುಕತೆಯಲ್ಲಿ ಸಹಕಾರಿ ಕ್ಷೇತ್ರದ ಬಗ್ಗೆ ಸಾಕಷ್ಟು ಚರ್ಚೆ ಮಾಡಿದ್ದೇವು. ಅವರು ಸಹಕಾರಿ ಕ್ಷೇತ್ರದಿಂದ ಹಿನ್ನೆಲೆಯವರಾದ ಕಾರಣ ಪ್ರಸ್ತುತ ಸಹಕಾರಿ ಬೆಳವಣಿಗಗಳ ಬಗ್ಗೆ ಮಾತನಾಡಿದ್ದೇವು ಎಂದು ಹೇಳಿದರು.
ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹಾಗೂ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡ್ಕೇರ್ ಭೇಟಿಗೆ ಸಮಯ ಕೋರಿದೆ. ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್ಗಳನ್ನು ತರುವ ಬಗ್ಗೆ ಮಾತುಕತೆ ನಡೆಸಬೇಕಿದೆ. ಹೀಗಾಗಿ ಇಬ್ಬರು ಸಚಿವರನ್ನು ಭೇಟಿ ಮಾಡಿ ಈ ಸಂಬಂಧ ಚರ್ಚೆ ಮಾಡುತ್ತೇನೆ. ನಾನು ಸಿಎಂ ಒಪ್ಪಿಗೆ ಪಡೆದೇ ದೆಹಲಿಗೆ ಬಂದಿದ್ದು, ಇದಕ್ಕೆ ರೆಕ್ಕೆ ಕಟ್ಟುವ ಅವಶ್ಯಕತೆ ಇಲ್ಲ ಎಂದು ಸವದಿ ಹೇಳಿದರು.
ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಸಚಿವರಾಗಿರುವ ಮಾನ್ಯ ಶ್ರೀ @DVSadanandGowda ಅವರನ್ನು ನವದೆಹಲಿಯಲ್ಲಿ ಇಂದು ಭೇಟಿ ಮಾಡಿ ಸಾರಿಗೆ ಇಲಾಖೆಗೆ ಸಂಬಂಧಪಟ್ಟ ಪ್ರಸ್ತಾವನೆಗಳ ಬಗ್ಗೆ ಚರ್ಚಿಸಲಾಯಿತು. pic.twitter.com/9XFNzZDxCQ
— Laxman Savadi (@LaxmanSavadi) July 27, 2020
ಸಂಪುಟ ವಿಸ್ತರಣೆ, ಪುನಾರಚನೆ ವಿಚಾರದಲ್ಲಿ ಸಿಎಂಗೆ ಪರಮಾಧಿಕಾರ ಇದೆ. ಅವರು ಸಂಪುಟ ಪುನಾರಚನೆ, ವಿಸ್ತರಣೆ ಏನಾದರೂ ಮಾಡಲಿ ಸಂಪುಟಕ್ಕೆ ಸೇರಿಸಿಕೊಳ್ಳುವುದು ಬಿಡುವುದು ಅವರಿಗೆ ಬಿಟ್ಟಿದ್ದು ಎಂದರು.
ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ ಪೂರ್ಣವಾಗಿದ್ದು, ಮುಖ್ಯಮಂತ್ರಿಯಾಗಿ ಲಕ್ಷ್ಮಣ ಸವದಿ ಬದಲಾಗಲಿದ್ದಾರೆ ಎನ್ನುವ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿದ್ದವು. ಈ ಹಿನ್ನೆಲೆಯಲ್ಲಿ ಲಕ್ಷ್ಮಣ ಸವದಿ ದೆಹಲಿಯಲ್ಲಿ ಸ್ಪಷ್ಟನೆ ನೀಡಿದರು.

Leave a Reply