ಸಿಎಂ ಶ್ರಮಜೀವಿ ಅವರಿಗೆ ಎಲ್ಲರೂ ಬೆಂಬಲ ನೀಡಬೇಕು: ಶಾಸಕ ಉಮೇಶ್ ಕತ್ತಿ

ಬೆಳಗಾವಿ/ಚಿಕ್ಕೋಡಿ: ಕೋವಿಡ್ ಸಂದರ್ಭದಲ್ಲಿ ಶ್ರಮಿಸುತ್ತಿರುವ ಸಿಎಂ ಯಡಿಯೂರಪ್ಪ ಶ್ರಮಜೀವಿ. ಅವರಿಗೆ ಎಲ್ಲರೂ ಬೆಂಬಲ ನೀಡಬೇಕು ಎಂದು ಹುಕ್ಕೇರಿಯ ಬಿಜೆಪಿ ಶಾಸಕ ಉಮೇಶ್ ಕತ್ತಿ ಯಡಿಯೂರಪ್ಪ ಪರ ಮಾತನಾಡಿದ್ದಾರೆ.

ಯಡಿಯೂರಪ್ಪ ಸರ್ಕಾರ ಒಂದು ವರ್ಷ ಪೂರ್ಣಗೊಂಡ ನೆನಪಿನ ಹಿನ್ನೆಲೆಯಲ್ಲಿ ಶಾಸಕ ಉಮೇಶ್ ಕತ್ತಿ ಅವರು ಹುಕ್ಕೇರಿ ತಾಲೂಕಿನ ಪಂಚಾಯತಿ ಕಚೇರಿ ಆವರಣದಲ್ಲಿ ಸಸಿ ನೆಟ್ಟಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಒಂದು ವರ್ಷದಲ್ಲಿ ಸಿಎಂ ಯಡಿಯೂರಪ್ಪ ಅತ್ಯುತ್ತಮವಾಗಿ ಸರ್ಕಾರ ನಡೆಸಿದ್ದಾರೆ. ಅತಿವೃಷ್ಟಿ ಹಾಗೂ ಕೋವಿಡ್ ಸಂದರ್ಭದಲ್ಲೂ ಚೆನ್ನಾಗಿ ಆಡಳಿತ ನಡೆಸಿದ್ದಾರೆ ಎಂದು ಸಿಎಂ ಪರ ಮಾತನಾಡಿದರು.

ವಿರೋಧ ಪಕ್ಷಗಳು ಅವ್ಯವಹಾರದ ಬಗ್ಗೆ ಸುಳ್ಳು ಆರೋಪ ಮಾಡುವುದನ್ನ ನಿಲ್ಲಿಸಬೇಕು. ಸಿದ್ದರಾಮಯ್ಯನವರು ಕೋವಿಡ್ ಸಂದರ್ಭದಲ್ಲಿ ಆರೋಪ ಮಾಡುವುದನ್ನ ಬಿಟ್ಟು ಸಹಕಾರ ನೀಡಬೇಕು. ಮುಂದಿನ ಮೂರು ವರ್ಷ ಯಡಿಯೂರಪ್ಪ ನೇತೃತ್ವದ ಸರ್ಕಾರ ಉತ್ತಮ ಆಡಳಿತ ನೀಡಲಿದೆ ಎಂದರು.

ಯಡಿಯೂರಪ್ಪನವರಿಗೆ ಪ್ರಧಾನಿ ಸೇರಿದಂತೆ ಎಲ್ಲ ಕೇಂದ್ರ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. ನಿಗಮ ಮಂಡಳಿ ಆಯ್ಕೆ ಹಿನ್ನೆಲೆ ಭಿನ್ನಮತ ವಿಚಾರವಾಗಿ ಪ್ರತಿಕ್ರಿಯಿಸಿದ ಉಮೇಶ್ ಕತ್ತಿ, ನಿಗಮ ಮಂಡಳಿ ಆಯ್ಕೆ ಸಂದರ್ಭದಲ್ಲಿ ಕೆಲ ಗೊಂದಲಗಳಿರುತ್ತವೆ, ಅದು ಸ್ವಾಭಾವಿಕ. ಶಾಸಕ ತಿಪ್ಪಾರೆಡ್ಡಿ ನಾನು ಇಬ್ಬರು ಉತ್ತಮ ಸ್ನೇಹಿತರಾಗಿದ್ದು, ಇಬ್ಬರು ಸಚಿವರಾಗುವ ದಿನಗಳು ದೂರ ಇಲ್ಲ ಎಂದು  ಹೇಳಿದ್ದಾರೆ.

Comments

Leave a Reply

Your email address will not be published. Required fields are marked *