ಹೆಣ್ಣುಮಕ್ಕಳಿಗೆ ಪೋಷಕರ ಆಸ್ತಿಯಲ್ಲಿ ಸಮಾನ ಪಾಲು ಪಡೆಯುವ ಹಕ್ಕಿದೆ: ಸುಪ್ರೀಂಕೋರ್ಟ್

ನವದೆಹಲಿ : ಹಿಂದೂ ಉತ್ತರಾಧಿಕಾರ 2005ರ ತಿದ್ದುಪಡಿ ಕಾಯ್ದೆಯಡಿ ಹೆಣ್ಣುಮಕ್ಕಳಿಗೆ ಪೋಷಕರ ಆಸ್ತಿಯಲ್ಲಿ ಸಮಾನ ಪಾಲು ಪಡೆಯುವ ಹಕ್ಕಿದೆ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.

ನ್ಯಾ.ಅರುಣ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಈ ಮಹತ್ವದ ಆದೇಶ ನೀಡಿದ್ದು, ಹಿಂದೂ ಅವಿಭಜಿತ ಕುಟುಂಬ (ಎಚ್‍ಯುಎಫ್) ಆಸ್ತಿಯಲ್ಲಿ ಪಾಲು ಹೊಂದಲು ಹೆಣ್ಣುಮಕ್ಕಳ ಹಕ್ಕಿದೆ ಎಂದು ಅಭಿಪ್ರಾಯ ಪಟ್ಟಿದೆ.

2005ರ ಸೆಪ್ಟೆಂಬರ್ 9 ರಂದು ತಿದ್ದುಪಡಿ ಪ್ರಕಾರ ತಂದೆ ಮತ್ತು ಮಗಳು ಇಬ್ಬರೂ ಜೀವಂತವಾಗಿದ್ದರೆ ಮಾತ್ರ ಆಕೆಗೆ ಸಮಾನ ಹಕ್ಕು ಇರುತ್ತದೆ ಎಂದು ತೀರ್ಪು ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ಹಲವು ಪುನರ್ ಪರಿಶೀಲನೆ ಅರ್ಜಿ ಸಲ್ಲಿಸಲಾಗಿತ್ತು. ಈ ಎಲ್ಲ ಅರ್ಜಿಗಳನ್ನು ಒಗ್ಗೂಡಿಸಿ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತ್ತು.

ಹೊಸ ಆದೇಶ ಅನ್ವಯ ಪೋಷಕರ ಆಸ್ತಿಯಲ್ಲಿ ಹೆಣ್ಣುಮಕ್ಕಳಿಗೂ ಸಮಾನವಾದ ಹಕ್ಕಿದೆ. ತಂದೆ ಜೀವಂತವಾಗಿದ್ದರೋ ಇಲ್ಲವೋ ಎಂಬುದನ್ನು ಲೆಕ್ಕಿಸದೆ ಆಕೆಗೆ ಆನುವಂಶಿಕ ಹಕ್ಕು ನೀಡಲಾಗುವುದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

Comments

Leave a Reply

Your email address will not be published. Required fields are marked *