– ಹೈಕಮಾಂಡ್, ಇಡಿ ಅಧಿಕಾರಿಗಳ ಭೇಟಿ
ನವದೆಹಲಿ: ಅಕ್ರಮ ಆಸ್ತಿಗಳಿಕೆ ಹಾಗೂ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜಾರಿ ನಿರ್ದೇಶನಾಲಯದ ಅಧಿಕಾರಿಗಳನ್ನು ಭೇಟಿ ಮಾಡಿ ಹೆಚ್ಚುವರಿ ದಾಖಲೆಗಳನ್ನು ನೀಡಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಡಿ.ಕೆ ಶಿವಕುಮಾರ್ ದೆಹಲಿಗೆ ಆಗಮಿಸಿದ್ದು, ಹೈಕಮಾಂಡ್ ನಾಯಕರ ಭೇಟಿಗೆ ಸಮಯ ಕೇಳಿದ್ದಾರೆ. ಇದೇ ಸಂದರ್ಭದಲ್ಲಿ ಇಡಿ ಅಧಿಕಾರಿಗಳನ್ನು ಭೇಟಿ ಸಂಬಂಧಿಸಿದ ದಾಖಲೆಗಳನ್ನು ನೀಡಲಿದ್ದಾರೆ.

ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಡಿ.ಕೆ ಶಿವಕುಮಾರ್ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಗಾಂಧಿ ಹಾಗೂ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಭೇಟಿಗೆ ಸಮಯ ಕೇಳಿದ್ದಾರೆ. ಆದರೆ ಸೋನಿಯಗಾಂಧಿ ಆರೋಗ್ಯ ಸಮಸ್ಯೆ ಹಾಗೂ ಕೊರೊನಾ ವೈರಸ್ ಹಿನ್ನೆಲೆ ಭೇಟಿ ಅನುಮಾನ ಎನ್ನಲಾಗಿದೆ. ಹೀಗಾಗಿ ಝೋಮ್ ಮೀಟಿಂಗ್ ಆ್ಯಪ್ ಮೂಲಕ ಮಾತುಕತೆ ನಡೆಸುವ ಸಾಧ್ಯತೆ ಇದೆ.
ಈ ಸಂಬಂಧ ದೆಹಲಿಯಲ್ಲಿ ಮಾತನಾಡಿರುವ ಶಿವಕುಮಾರ್, ಎಐಸಿಸಿ ನಾಯಕರ ಭೇಟಿಗಾಗಿ ದೆಹಲಿಗೆ ಬಂದಿದ್ದೇನೆ. ರಾಜ್ಯದಲ್ಲಿ ಕೆಪಿಸಿಸಿ ಕೈಗೊಂಡಿರುವ ನಾಲ್ಕೈದು ತಿಂಗಳ ವರದಿಯನ್ನು ಹೈಕಮಾಂಡಿಗೆ ಸಲ್ಲಿಸಲಿದ್ದೇನೆ. ಇದರ ಜೊತೆಗೆ ಇಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಮಾಹಿತಿಯನ್ನು ಅಧಿಕಾರಿಗಳು ಕೇಳಿದ್ದು, ಅವುಗಳಿಗೆ ಸ್ಪಷ್ಟನೆ ನೀಡಲಿದ್ದೇವೆ ಎಂದರು.


Leave a Reply