ಅಖಂಡ ಹೇಳಿಕೆಯಿಂದ ವಿಚಲಿತರಾಗಿ ಅಧಿಕಾರಿಗಳನ್ನು ಬೆದರಿಸೋ ಮಾರ್ಗ ತುಳಿದಿದ್ದೀರಿ: ವಿಜಯೇಂದ್ರ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಮಾತನಾಡುತ್ತಾ ‘ಮಿಸ್ಟರ್ ಕಮಿಷನರ್ ಬೀ ಕೇರ್ ಫುಲ್’ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರರ್ ಅವರಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಟಾಂಗ್ ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮಾನ್ಯ ಡಿಕೆಶಿ ಅವರೇ ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಎಂಬಂತೆ ಗಲಭೆಯ ಕ್ರೌರ್ಯಕ್ಕೆ ತುತ್ತಾದ ನಿಮ್ಮ ಶಾಸಕರೇ ‘ಇದು ಸ್ಥಳೀಯ ಕಾಂಗ್ರೆಸ್ ಮುಖಂಡರ ಕೈವಾಡ’ ಎಂದು ಹೇಳಿದ್ದಾರೆ. ಇದರಿಂದ ವಿಚಲಿತರಾಗಿರುವ ನೀವು ಇದೀಗ ಪೊಲೀಸ್ ಅಧಿಕಾರಿಗಳನ್ನು ಬೆದರಿಸುವ ಮಾರ್ಗ ತುಳಿದಿದ್ದೀರಿ. ಇದು ನಿಮ್ಮ ಹತಾಶೆ ಹಾಗೂ ಭಂಡತನವನ್ನು ಸಾಕ್ಷೀಕರಿಸುತ್ತಿದೆ ಎಂದು ಬರೆದುಕೊಳ್ಳುವ ಮೂಲಕ ತಿರುಗೇಟು ನೀಡಿದ್ದಾರೆ.

ಡಿಕೆಶಿ ಹೇಳಿದ್ದೇನು..?
ಗುರುವಾರ ದೇೀವರಾಜ್ ಅರಸರ ಜನ್ಮದಿನದಂದೇ ‘ಬಿಜೆಪಿ ವಿರುದ್ಧ ಕಾಂಗ್ರೆಸ್ ಜನಧ್ವನಿ’ ಹೆಸರಲ್ಲಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಈ ವೇಳೆ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ಮಾತನಾಡಿದ್ದ ಡಿಕೆಶಿ, ಮಿಸ್ಟರ್ ಪೊಲೀಸ್ ಕಮೀಷನರ್ ಬೆಂಗಳೂರಿನಲ್ಲಿ ನಡೆದ ಗಭೆಯಲ್ಲಿ ನೀವು ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದ್ದೀರಿ. ಕಾಂಗ್ರೆಸ್ ನಾಯಕರನ್ನು ಫಿಕ್ಸ್ ಮಾಡುವ ಕೆಲಸ ಮಾಡುತ್ತಿದ್ದೀರಿ. ಬಿಜೆಪಿ ಸಚಿವರಿಂದ ಇನ್ಫ್ಲೂಯೆನ್ಸ್ ಆಗಿ ಕೆಲಸ ಮಾಡುತ್ತಿದ್ದೀರಿ. ಪೊಲೀಸರು ಹೀಗೆ ಪಕ್ಷಪಾತ ಮಾಡಿದರೆ ಡಿ.ಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಕೈಕಟ್ಟಿ ಕೂರಲ್ಲ ಎಂಬ ಎಚ್ಚರಿಕೆಯ ಸಂದೇಶ ರವಾನಿಸಿದ್ದರು.

ಕಾಂಗ್ರೆಸ್ ಪಾರ್ಟಿಯನ್ನ ಫಿಕ್ಸ್ ಮಾಡಬೇಕು ಅಂತ ಪ್ರಯತ್ನ ನಡೆಯುತ್ತಿದೆ. ಬಿಜೆಪಿ ವಿರುದ್ಧ ಅಲ್ಲ ಪೊಲೀಸರ ವಿರುದ್ಧ ನಾವು ಹೋರಾಟ ಆರಂಭ ಮಾಡುತ್ತೇವೆ. ಮಿಸ್ಟರ್ ಕಮಿಷನರ್ ಬಿ ಕೇರ್ ಪುಲ್. ಇದನ್ನ ಮನವಿಯಾದರೂ ಅನ್ಕೊಳ್ಳಿ ಎಚ್ಚರಿಕೆ ಅಂತ ಆದರೂ ಅಂದುಕೊಳ್ಳಿ. ಗಲಭೆಯನ್ನ ಪೊಲೀಸರು ನಿಯಂತ್ರಣ ಮಾಡುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದರು.

Comments

Leave a Reply

Your email address will not be published. Required fields are marked *