ಗ್ಯಾಂಬ್ಲಿಂಗ್ ಅಡ್ಡೆಗೆ ನುಗ್ಗಿದ ಪೊಲೀಸರು- 65 ಜನರ ಬಂಧನ, 60 ಲಕ್ಷ ವಶ

ಬೆಂಗಳೂರು: ಜೂಜು ಆಡುವ ನೆಪದಲ್ಲಿ ಹೋಟೆಲ್ ಒಳಗೆ ತೆರಳಿ ಗ್ಯಾಂಬ್ಲಿಂಗ್ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬರೋಬ್ಬರಿ 65 ಜನರನ್ನು ಬಂಧಿಸಿದ್ದು, 60 ಲಕ್ಷ ರೂ.ಗಳ ನಗದು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಮಹದೇವಪುರ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಗ್ಯಾಂಬ್ಲಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಜೂಜೂ ಆಡುವವರ ವೇಶದಲ್ಲಿ ಹೋಟೆಲ್ ಒಳಗೆ ನುಗ್ಗಿದ್ದು, ಈ ವೇಳೆ ಗ್ಯಾಂಬ್ಲಿಂಗ್ ನಲ್ಲಿ ತೊಡಗಿದ್ದ ಬರೋಬ್ಬರಿ 65 ಜನರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 80 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ.

ಲಕ್ಷಾಂತರ ರೂಪಾಯಿಗಳನ್ನು ಪಣಕ್ಕಿಟ್ಟು ಆರೋಪಿಗಳು ಗ್ಯಾಂಬ್ಲಿಂಗ್ ಆಡುತ್ತಿರುವುದು ಈ ವೇಳೆ ಬೆಳಕಿಗೆ ಬಂದಿದೆ. ಪ್ರಕರಣದ ಕುರಿತು ಸಿಸಿಬಿ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಬಂಧಿತರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಅಲ್ಲದೆ ಗ್ಯಾಂಬ್ಲಿಂಗ್ ಸೆಂಟರ್‍ಗಳ ಮೇಲಿನ ದಾಳಿಯನ್ನು ಮುಂದುವರಿಸಿದ್ದಾರೆ. ಡಿಸಿಪಿ ರವಿಕುಮಾರ್ ಹಾಗೂ ತಂಡದಿಂದ ದಾಳಿ ನಡೆದಿದ್ದು, ಅಪಾರ ಪ್ರಮಾಣದ ನಗದು ವಶಪಡಿಸಿಕೊಂಡಿದ್ದಾರೆ.

Comments

Leave a Reply

Your email address will not be published. Required fields are marked *