ನವೆಂಬರ್ 17ರಿಂದ ಪದವಿ ಕಾಲೇಜು ಆರಂಭ

ಬೆಂಗಳೂರು: ಕೊರೊನಾ ವೈರಸ್ ಭೀತಿಯಿಂದ ಶಾಲಾ-ಕಾಲೇಜು ಬಂದ್ ಮಾಡಲಾಗಿತ್ತು. ಆದರೆ ಇದೀಗ ನವೆಂಬರ್ 17ರಿಂದ ಎಲ್ಲಾ ಡಿಗ್ರಿ ಕಾಲೇಜುಗಳು ಆರಂಭವಾಗಲಿದೆ.

ಇಂದು ಸಿಎಂ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ಕರೆಯಲಾಗಿದ್ದು, ಈ ಸಭೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ ಕಾಲೇಜು ಪ್ರಾರಂಭ ಮಾಡುವುದಾಗಿ ನಿರ್ಣಯಿಸಲಾಗಿದೆ. ಮಾರ್ಗಸೂಚಿ ಪಾಲನೆಯನ್ನು ಕಾಲೇಜು ಶಿಕ್ಷಣ ಇಲಾಖೆಗೆ ಹೆಗಲಿಗೆ ಹಾಕಲಾಗಿದೆ. ಮಾರ್ಗಸೂಚಿ ಪಾಲನೆಗೆ ಅಗತ್ಯ ಕ್ರಮವಹಿಸಿ ಎಂದು ಸಿಎಂ ಸೂಚನೆ ನೀಡಿದ್ದಾರೆ. ನವೆಂಬರ್ 17 ರಿಂದ ಎಂಜಿನಿಯರಿಂಗ್, ಡಿಪ್ಲೊಮಾ, ಪದವಿ ಕಾಲೇಜು ಪ್ರಾರಂಭ ಮಾಡುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಆನ್ ಲೈನ್, ಆಫ್ ಲೈನ್ ತರಗತಿ ಪಡಿಯೋ ಅವಕಾಶ ವಿದ್ಯಾರ್ಥಿಗೆ ಬಿಟ್ಟಿದ್ದಾಗಿದೆ. ಕಾಲೇಜಿಗೆ ಬರೋರು ರಿಜಿಸ್ಟರ್ ಮಾಡಿಕೊಳ್ಳಬೇಕು. ಅಲ್ಲದೆ ಪೋಷಕರ ಒಪ್ಪಿಗೆ ಕಡ್ಡಾಯವಾಗಿದೆ. ಕಾಲೇಜು ಬರೋರಿಗೆ ಇಲಾಖೆ ವ್ಯವಸ್ಥೆ ಮಾಡುತ್ತೆ. ಹಾಸ್ಟೆಲ್ ವಿದ್ಯಾರ್ಥಿಗಳಿಗೂ ಅಗತ್ಯ ಮುಂಜಾಗ್ರತಾ ಕ್ರಮದ ವ್ಯವಸ್ಥೆ ಮಾಡುವುದಾಗಿ ನಿರ್ಧರಿಸಲಾಯಿತು.

ಪ್ರಾಕ್ಟಿಕಲ್ ಕ್ಲಾಸ್‍ಗೆ ಮೊದಲ ಆದ್ಯತೆ ನೀಡಲಾಗುತ್ತಿದ್ದು, ಯುಜಿಸಿ ನಿಯಮದ ಪ್ರಕಾರ ಕಾಲೇಜು ಪ್ರಾರಂಭ ಮಾಡಲಾಗುತ್ತದೆ. ವಿದ್ಯಾರ್ಥಿಗಳ ಒತ್ತಾಸೆ ಮೇರೆಗೆ ಕಾಲೇಜು ಪ್ರಾರಂಭ ಮಾಡುವ ನಿರ್ಧಾರ ಸಭೆಯಲ್ಲಿ ಮಾಡಲಾಯಿತು. ಪ್ರತಿ ಕಾಲೇಜಿನಲ್ಲಿ ಟಾಸ್ಕ್ ಫೋರ್ಸ್ ಇರುತ್ತೆ. ಅಲ್ಲದೆ ಪ್ರತಿ ಜಿಲ್ಲೆಗೆ ಡಿಸಿ ನೇತೃತ್ವದಲ್ಲಿ ಸಮಿತಿ ರಚಿಸಲಾಗುತ್ತದೆ. ಯಾರಿಗೂ ಒತ್ತಾಯ ಮಾಡಲ್ಲ. ಪೋಷಕರ ಅನುಮತಿ ಪತ್ರ ಕಡ್ಡಾಯ ಇರಬೇಕು. ಕಲಿಕೆಗೆ ಒತ್ತು ನೀಡುವ ಕೆಲಸ ಸರ್ಕಾರ ನೀಡ್ತಿದೆ ಎಂದು ಚರ್ಚಿಸಲಾಯಿತು.

ಸಭೆಯಲ್ಲಿ ಡಿಸಿಎಂ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಹಾಗೂ ಉನ್ನತ ಶಿಕ್ಷಣ ಇಲಾಖೆ ಸಲಹೆಗಾರ ದೊರೆಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *