ಒಂದೇ ದಿನ ರಾಜಕೀಯ, ದಾಂಪತ್ಯ ಜೀವನಕ್ಕೆ ಕಾಲಿಟ್ಟ ಯುವಕ

ಗದಗ: ಹಸೆ ಮಣೆ ಏರುವ ದಿನವೇ ಹಣೆಗೆ ಬಾಸಿಂಗ ಕಟ್ಟಿಕೊಂಡು ಬಂದ ವರನೊಬ್ಬ ಗ್ರಾಮ ಪಂಚಾಯಿತಿ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಮೂಲಕ ಅಚ್ಚರಿ ಮೂಡಿಸಿದ್ದಾನೆ.

ಜಿಲ್ಲೆಯ ಗದಗ ತಾಲೂಕಿನ ಸೊರಟೂರ ಗ್ರಾಮದಲ್ಲಿ ಘಟನೆ ನಡೆದಿದ್ದು, ಯುವಕ ಪರಶುರಾಮ ಮಲ್ಲಾರಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ದಿನವೇ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಮದುವೆ ದಿನವೇ ನಾಮಪತ್ರ ಸಲ್ಲಿಸಿದ್ದರಿಂದ ಪರಶುರಾಮ ಅವರು ಹಣೆಗೆ ಬಾಸಿಂಗ ಕಟ್ಟಿಕೊಂಡು, ಮದುವೆ ಧರಿಸಿನಲ್ಲೇ ಗ್ರಾಮಸ್ಥರೊಂದಿಗೆ ಬಂದು ನಾಮಪತ್ರ ಸಲ್ಲಿಸಿದ್ದಾರೆ. ಕುಟುಂಬಸ್ಥರು, ಸ್ನೇಹಿತರು ಹಾಗೂ ಮದುವೆಯಾಗಿರುವ ಪತ್ನಿ ಒಪ್ಪಿಗೆ ಹಾಗೂ ಸಲಹೆ ಪಡೆದು ಚುನಾವಣೆ ಕಣಕ್ಕಿಳಿದಿದ್ದಾರೆ. ರಾಜಕೀಯ ಹಾಗೂ ನವ ದಾಂಪತ್ಯದ ಜೀವನಕ್ಕೆ ಒಂದೇ ದಿನ ಕಾಲಿಡುತ್ತಿರುವುದು ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿದೆ. ಈ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

Comments

Leave a Reply

Your email address will not be published. Required fields are marked *