ಮೊದಲು ಮೋದಿ ಲಸಿಕೆ ತೆಗೆದುಕೊಳ್ಳಲಿ, ನಂತ್ರ ನಾವು ಪಡೆದುಕೊಳ್ತೀವಿ: ತೇಜ್ ಪ್ರತಾಪ್ ಯಾದವ್

ಪಾಟ್ನಾ: ಇನ್ನೇನು ಕೆಲವೇ ದಿನಗಳಲ್ಲಿ ಕೊರೊನಾ ಲಸಿಕೆ ಭಾರತೀಯರ ಕೈ ಸೇರಲಿದೆ. ಈ ಲಸಿಕೆ ಬಗ್ಗೆ ಪ್ರತಿಪಕ್ಷದವರು ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಅಂತೆಯೇ ಇದೀಗ ಆರ್‍ಜೆಡಿ ನಾಯಕ ತೇಜ್ ಪ್ರತಾಪ್ ಯಾದವ್ ಕೂಡ ಟೀಕಿಸಿ, ಸವಾಲೆಸೆದಿದ್ದಾರೆ.

ಈ ಸಂಬಂಧ ಮಾಧ್ಯಮದ ಜೊತೆ ಮಾತನಾಡಿದ ಯಾದವ್, ಮೊದಲು ಪ್ರಧಾನಿ ನರೇಂದ್ರ ಮೋದಿಯವರು ಕೊರೊನಾ ಲಸಿಕೆ ತೆಗೆದುಕೊಳ್ಳಲಿ. ನಂತರವಷ್ಟೇ ನಾವು ಲಸಿಕೆ ಪಡೆದುಕೊಳ್ಳುವುದಾಗಿ ಚಾಲೆಂಜ್ ಹಾಕಿದ್ದಾರೆ.

ಕೋವಿಡ್ 19 ನಿರೋಧಕ ದೇಸೀ ಲಸಿಕೆ ಕುರಿತಂತೆ ಯಾವುದೇ ಅಪಪ್ರಚಾರ ಮಾಡಬೇಡಿ ಎಂದು ಬಿಜೆಪಿ ನಾಯಕರು ಮನವಿ ಮಾಡಿಕೊಳ್ಳುತ್ತಿರುವ ಬೆನ್ನಲ್ಲೇ ಆರ್‍ಜೆಡಿ ನಾಯಕ ಈ ರೀತಿ ಹೇಳಿರುವುದು ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದೆ.

ಒಟ್ಟಿನಲ್ಲಿ ಕೊರೊನಾ ಲಸಿಕೆ ವಿತರಣೆಗೆ ಸಿದ್ಧತೆ ನಡೆಯುತ್ತಿದ್ದಂತೆಯೇ ಇತ್ತ ಅದರಲ್ಲಿ ರಾಜಕೀಯ ಕೂಡ ಆರಂಭವಾಗಿದೆ. ಈ ಹಿಂದೆ ಭಾರತ್ ಬಯೋಟೆಕ್ ಸಂಸ್ಥೆಯ ಲಸಿಕೆ ಕೋವ್ಯಾಕ್ಸಿನ್ ಗೆ ಅನುಮತಿ ನೀಡಿರುವ ಬಗ್ಗೆ ಮಾಜಿ ಕೇಂದ್ರ ಸಚಿವರಾದ ಶಿಶಿ ತರೂರ್ ಹಾಗೂ ಜಯರಾಮ್ ರಮೇಶ್ ಪ್ರಶ್ನೆ ಮಾಡಿದ್ದರು.

ಇನ್ನು ಸಮಾಜವಾದಿ ಪಕ್ಷದ ನಾಯಕ, ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ಬಿಜೆಪಿ ಲಸಿಕೆಯಲ್ಲಿ ನನಗೆ ನಂಬಿಕಲೆ ಇಲ್ಲ ಎಂದು ಹೇಳುವ ಮೂಲಕ ಭಾರೀ ಚರ್ಚೆಗೆ ಗ್ರಾಸವಾಗಿದ್ದರು. ಸದ್ಯಕ್ಕೆ ನಾನು ಲಸಿಕೆ ಹಾಕಲು ಹೋಗುತ್ತಿಲ್ಲ. ಬಿಜೆಪಿಯ ಲಸಿಕೆಯನ್ನು ನಾನು ಹೇಗೆ ನಂಬುವುದು ಎಂದು ಪ್ರಶ್ನಸಿದ್ದರು. ನಮ್ಮ ಸರ್ಕಾರ ರಚನೆಯಾದಾಗ ಎಲ್ಲರಿಗೂ ಉಚಿತ ಲಸಿಕೆ ಸಿಗುತ್ತದೆ. ನಾವು ಬಿಜೆಪಿಯ ಲಸಿಕೆ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದರು.

Comments

Leave a Reply

Your email address will not be published. Required fields are marked *