ಮದ್ಯ ಕುಡಿಯಲು ಹಣ ನೀಡದ್ದಕ್ಕೆ ಆತ್ಮಹತ್ಯೆ

ಧಾರವಾಡ: ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ತಾಲೂಕಿನ ಬಾಡ ಗ್ರಾಮದಲ್ಲಿ ನಡೆದಿದೆ.

ಬಸವರಾಜ್ ಬಿಂಗಿ ಆತ್ಮಹತ್ಯೆಗೆ ಶರಣಾದ ವ್ಯಕಿ ಗ್ರಾಮದ ಹೊರವಲಯದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಬಸವರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೇಣು ಹಾಕಿಕೊಂಡ ಹಗ್ಗ ತುಂಡಾಗಿದ್ದರಿಂದ ಮರದ ಬುಡದಲ್ಲಿ ಬಸವರಾಜ್ ಶವ ಪತ್ತೆಯಾಗಿತ್ತು. ಶವ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮದ್ಯ ವ್ಯಸನಿಯಾಗಿದ್ದ ಬಸವರಾಜನಿಗೆ ಕುಡಿಯಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಆತ ಆತ್ಮಹತ್ಯೆ ಮಾಡಿಕೊಂಡಿರುವದಾಗಿ ತಿಳಿದು ಬಂದಿದೆ.

ಮೂಲತಃ ಮಡಕಿ ಹೊನ್ನಳ್ಳಿ ಗ್ರಾಮದವನಾಗಿರುವ ಬಸವರಾಜ್, ಹಲವು ವರ್ಷಗಳಿಂದ ತನ್ನ ಅತ್ತೆಯಾದ ಬಾಡ ಗ್ರಾಮದ ಮನೆಯಲ್ಲೇ ವಾಸವಾಗಿದ್ದ. ಸದ್ಯ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Comments

Leave a Reply

Your email address will not be published. Required fields are marked *