ಟೆಸ್ಟ್ ಸರಣಿಯಲ್ಲಿ ಭಾರತಕ್ಕೆ ಜಯ – ಮೋದಿ, ಬಿಎಸ್‍ವೈ ಅಭಿನಂದನೆ

ಬೆಂಗಳೂರು: ಬರೋಬ್ಬರಿ 32 ವರ್ಷದ ಬಳಿಕ ಬ್ರಿಸ್ಬೇನ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಗೆಲುವು ಸಾಧಿಸಿದ್ದು, ಈ ಹಿನ್ನೆಲೆಯಲ್ಲಿ ಎಲ್ಲೆಡೆಯಿಂದಲೂ ಶುಭಾಶಯಗಳ ಸುರಿಮಳೆಯೇ ಹರಿದು ಬರುತ್ತಿದೆ. ಅದೇ ರೀತಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕೂಡ ಟೀಂ ಇಂಡಿಯಾಕ್ಕೆ ಶುಭ ಕೋರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ, ಆಸ್ಟ್ರೇಲಿಯಾದಲ್ಲಿ ಭಾರತೀಯ ಕ್ರಿಕೆಟ್ ತಂಡ ಯಶಸ್ಸು ಸಾಧಿಸಿದ್ದು, ಇದರಿಂದ ಇಂದು ನಾವೆಲ್ಲರೂ ಖುಷಿಪಟ್ಟಿದ್ದೇವೆ. ಅವರ ಗಮನಾರ್ಹ ಶಕ್ತಿ ಮತ್ತು ಉತ್ಸಾಹವು ಉದ್ದಕ್ಕೂ ಗೋಚರಿಸಿತು. ಟೀಂ ಇಂಡಿಯಾ ತಂಡಕ್ಕೆ ಅಭಿನಂದನೆಗಳು. ನಿಮ್ಮ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.

ಇತ್ತ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕೂಡ ಟ್ವೀಟ್ ಮಾಡಿ, ಬ್ರಿಸ್ಬೇನ್‍ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ ಟೀಮ್ ಇಂಡಿಯಾಗೆ ಅಭಿನಂದನೆಗಳು ಎಂದು ಹೇಳಿದ್ದಾರೆ. ಇದನ್ನೂ ಓದಿ: 32 ವರ್ಷದ ಬಳಿಕ ಬ್ರಿಸ್ಬೇನ್ ನಲ್ಲಿ ಆಸ್ಟ್ರೇಲಿಯಾಗೆ ಮೊದಲ ಸೋಲು..!

ಒಟ್ಟಿನಲ್ಲಿ ಟೀ ಇಂಡಿಯಾ ಐತಿಹಾಸಿಕ ಗೆಲುವನ್ನು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಕ್ರಿಕೆಟಿಗರು, ಗಣ್ಯರು ಸೇರಿದಂತೆ ಹಲವಾರು ಮಂದಿ ಟೀಂ ಇಂಡಿಯಾಗೆ ಶುಭ ಹಾರೈಸುತ್ತಿದ್ದಾರೆ. ಇತ್ತ ಕ್ರಿಕೆಟಿಗರು ಕೂಡ ಗೆಲುವಿನ ಸಂಭ್ರಮದಲ್ಲಿದ್ದಾರೆ.

Comments

Leave a Reply

Your email address will not be published. Required fields are marked *