ಕರ್ನಾಟಕ ಭವನ ಏನು ಬಿಜೆಪಿ ಕರ್ನಾಟಕದ ಬೆಡ್‍ರೂಮಾ – ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಕರ್ನಾಟಕ ಭವನ ಏನು ಬಿಜೆಪಿ ಕರ್ನಾಟಕದ ಬೆಡ್‍ರೂಮಾ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಅಧಿಕಾರ ದುರ್ಬಳಕೆ ಮಾಡಿಕೊಂಡು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ವಿಷಯವನ್ನು ಪ್ರಸ್ತಾಪ ಮಾಡಿ ಏನ್ರಿ ಬಿಜೆಪಿ ಫಾರ್ ಕರ್ನಾಟಕ ಇದೆಲ್ಲ ಎಂದು ಪ್ರಶ್ನೆ ಮಾಡಿದೆ.

ಅಧಿಕಾರ ದುರ್ಬಳಕೆ ಮಾಡಿ ಲೈಂಗಿಕ ತೃಷೆ ತೀರಿಸಿಕೊಳ್ಳುತ್ತಿದ್ದ ಸರ್ಕಾರದ ಪ್ರಭಾವಿ ವ್ಯಕ್ತಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಸಂಜೆ ದೂರು ದಾಖಲಾಗಿದೆ.

ದೂರು ನೀಡಿದ ಬಳಿಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ಪ್ರಭಾವಿ ನಾಯಕರ ವಿರುದ್ಧ ದೂರು ನೀಡುತ್ತಿದ್ದೇನೆ. ಸಂತೃಸ್ತೆಯ ಹೆಸರು ಬಹಿರಂಗ ಪಡಿಸುವುದಿಲ್ಲ. ಸಂತ್ರಸ್ತೆಗೆ ಬೆದರಿಕೆ ಇರುವ ಕಾರಣ ಮಹಿಳೆ ಬಂದಿಲ್ಲ ಎಂದು ತಿಳಿಸಿದ್ದಾರೆ.

ಡ್ರೋನ್ ಕ್ಯಾಮೆರಾಗಳ ಮೂಲಕ ಕರ್ನಾಟಕದ ಡ್ಯಾಂ ಗಳನ್ನು ಚಿತ್ರೀಕರಣ ಮಾಡಲು ಮಹಿಳೆ ಬಯಸಿದ್ದರು. ಆದರೆ ಈ ಮಹಿಳೆಯನ್ನು ರಮೇಶ್ ಜಾರಕಿಹೊಳಿ ತನ್ನ ಕಾಮ ತೃಷೆಗೆ ಬಳಸಿಕೊಳ್ಳುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ.

Comments

Leave a Reply

Your email address will not be published. Required fields are marked *