ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್‍ನಲ್ಲಿ ಹಳೆ ವಾಹನಗಳ ಗುಜರಿ ನೀತಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿತ್ತು. ಇದೀಗ ಇದಕ್ಕೆ ಸಂಬಂಧಿಸಿದ ಕರಡನ್ನು ಕೇಂದ್ರ ಸರ್ಕಾರ ಇದೀಗ ಬಿಡುಗಡೆ ಮಾಡಿದೆ.
15 ವರ್ಷ ಮೇಲ್ಪಟ್ಟ ಹಳೆಯ ವಾಹನಗಳ ಪರವಾನಗಿ ನವೀಕರಣ, ನೋಂದಣಿ ಮತ್ತು ಫಿಟ್‍ನೆಸ್ ಸರ್ಟಿಫಿಕೇಟ್ ಶುಲ್ಕಗಳನ್ನು 8 ಪಟ್ಟು ಹೆಚ್ಚಿಸಿ ಹಳೆ ವಾಹನ ಮಾಲೀಕರಿಗೆ ಶಾಕ್ ನೀಡಿದೆ. ಹಳೆ ವಾಹನಗಳನ್ನು ಗುಜರಿಗೆ ಹಾಕಿ ಹೊಸ ವಾಹನ ಖರೀದಿಗೆ ಉತ್ತೇಜಿಸಲು ಈ ಕ್ರಮ ತೆಗೆದುಕೊಳ್ಳುತ್ತಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

ಕಾರಿನ ಪರವಾನಗಿ ನವೀಕರಣಕ್ಕೆ ಇನ್ಮುಂದೆ 5 ಸಾವಿರ ರೂ.ವರೆಗೂ ವ್ಯಯಿಸಬೇಕಾಗುತ್ತದೆ. ದ್ವಿಚಕ್ರ ವಾಹನದ ನೋಂದಣಿ ನವೀಕರಣಕ್ಕೆ 300 ರೂ. ಬದಲಾಗಿ ಸಾವಿರ ರೂ. ಕೊಡಬೇಕಾಗುತ್ತದೆ. ಗೂಡ್ಸ್ ಗಾಡಿಗಳಿಗೆ 10 ಸಾವಿರ ರೂಪಾಯಿ, ಭಾರೀ ವಾಹನಗಳಿಗೆ 12,500 ರೂಪಾಯಿ, ಟ್ಯಾಕ್ಸಿ ಕಾರುಗಳಿಗೆ 7 ಸಾವಿರ ರೂಪಾಯಿ ಖರ್ಚಾಗಲಿದೆ. 15 ವರ್ಷ ಮೇಲ್ಪಟ್ಟ ಇಂಪೋರ್ಟೆಡ್ ಕಾರುಗಳ ಮರು ನೋಂದಣಿಗೆ 40 ಸಾವಿರ ರೂಪಾಯಿ ತೆರಬೇಕಾಗುತ್ತದೆ. ಇದರಿಂದ ಆಟೋ ಮೊಬೈಲ್ ಉದ್ಯಮಕ್ಕೆ ದೊಡ್ಡ ಮಟ್ಟದ ಲಾಭ ಆಗಲಿದೆ ಎಂದು ನಿತಿನ್ ಗಡ್ಕರಿ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: 20 ವರ್ಷದ ಹಳೆಯ ವಾಹನಗಳು ಗುಜುರಿಗೆ – ಸೀತಾರಾಮನ್ ಹೇಳಿದ್ದು ಏನು? ಏನಿದು ಗುಜುರಿ ನೀತಿ?

ಈ ಮಧ್ಯೆ, ಈ ವರ್ಷದೊಳಗೆ ಎಲ್ಲಾ ಟೋಲ್ ಪ್ಲಾಜಾಗಳನ್ನು ತೆಗೆದುಹಾಕಿ, ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿ ಮಾಡೋದಾಗಿ ಲೋಕಸಭೆಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ.

Leave a Reply