ಗಮನಿಸಿ, ಒಂದಲ್ಲ, ಎರಡು ತಿಂಗಳ ನಂತ್ರ ಸಿಗಲಿದೆ ಕೋವಿಶೀಲ್ಡ್ ಎರಡನೇ ಡೋಸ್

– ರಾಜ್ಯ ಸರ್ಕಾರಗಳಿಗೆ ಕೇಂದ್ರದಿಂದ ಆದೇಶ

ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಇಡೀ ದೇಶ ಒಂದಾಗಿ ಹೋರಾಡುತ್ತಿದೆ. ಕೊರೊನಾ ವ್ಯಾಕ್ಸಿನ್ ನೀಡುವ ಕಾರ್ಯಕ್ರಮ ಸಹ ಭರದಿಂದ ಸಾಗುತ್ತಿದೆ. ಈ ನಡುವೆ ಕೋವಿಶೀಲ್ಡ್ ಲಸಿಕೆಯ ಎರಡು ಡೋಸ್ ಗಳ ನಡುವಿನ ಅಂತರವನ್ನ 28 ದಿನದಿಂದ ಎರಡು ತಿಂಗಳಿಗೆ ಹೆಚ್ಚಿಸಲಾಗಿದೆ.

ಕೋವಿಶೀಲ್ಡ್ ಮೊದಲ ಮತ್ತು ಎರಡನೇ ಡೋಸ್ ನಡುವಿನ ಅಂತರವನ್ನ 6 ರಿಂದ 8 ವಾರಗಳಿಗೆ ಹೆಚ್ಚಿಸಲಾಗಿದೆ. ಸದ್ಯ 28 ದಿನಕ್ಕೆ ಎರಡನೇ ಡೋಸ್ ನೀಡಲಾಗುತ್ತಿದೆ. ತಜ್ಞರ ಸಲಹೆ ಮೇರೆಗೆ ಮೊದಲ ಡೋಸ್ ಪಡೆದ ಬಳಿಕ ಎರಡನೇ ಡೋಸ್ ನೀಡುವ ನಡುವಿನ ಅವಧಿಯನ್ನ ಹೆಚ್ಚಿಸಲಾಗಿದೆ ಎಂದು ಕೇಂದ್ರ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದೆ.

ಎನ್‍ಟಿಎಜಿಐ ಮತ್ತು ವ್ಯಾಕ್ಸಿನೇಷನ್ ಎಕ್ಸಪರ್ಟ್ ಗ್ರೂಪ್ ರಿಸರ್ಚ್ ಪ್ರಕಾರ ಡೋಸ್ ಗಳ ನಡುವಿನ ಅಂತರ ಹೆಚ್ಚಿಸುವದರಿಂದ ಹೆಚ್ಚು ಲಾಭದಾಯಕವಾಗಿರಲಿದೆ ಎಂದು ತಿಳಿದು ಬಂದಿದೆ. ಆದ್ದರಿಂದ ತಜ್ಞರ ತಂಡ ಕೇಂದ್ರಕ್ಕೆ ಶಿಫಾರಸ್ಸು ಮಾಡಿತ್ತು ಎಂದು ವರದಿಯಾಗಿದೆ.

ಮಹಾರಾಷ್ಟ್ರದ ಪುಣೆಯ ಸೇರಂ ಇನ್ಸಿಟ್ಯೂಟ್ ನಲ್ಲಿ ಕೋವಿಶೀಲ್ಡ್ ಲಸಿಕೆ ಉತ್ಪಾದನೆ ಆಗುತ್ತಿದೆ. ಜನವರಿ 16ರಿಂದ ದೇಶದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭವಾಗಿತ್ತು. ಎರಡನೇ ಡೋಸ್ ಮಾರ್ಚ್ 1ರಿಂದ ಆರಂಭಿಸಲಾಗಿತ್ತು.

Comments

Leave a Reply

Your email address will not be published. Required fields are marked *