ಉಪ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ಪುಟ್ಟರಂಗಶೆಟ್ಟಿ, ರಾಜು ಗೌಡಗೆ ಕೊರೊನಾ

ಚಾಮರಾಜನಗರ/ಯಾದಗಿರಿ: ಉಪ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಮತ್ತು ಶಾಸಕ ರಾಜುಗೌಡ ಅವರಿಗೆ ಇಂದು ಕೊರೊನಾ ದೃಢವಾಗಿದೆ.

ಕಳೆದ ಒಂದು ವಾರದಿಂದ ಬೆಳಗಾವಿ, ಮಸ್ಕಿ ಹಾಗೂ ಬಸವಕಲ್ಯಾಣದ ಉಪ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡು ಎರಡು ದಿನಗಳ ಹಿಂದೆಯಷ್ಟೇ ಸ್ವಕ್ಷೇತ್ರಕ್ಕೆ ಹಿಂತಿರುಗಿದ್ದರು. ನೆಗಡಿ ಹಾಗೂ ಮೈ-ಕೈ ನೋವಿನ ಗುಣಲಕ್ಷಣ ಕಾಣಿಸಿಕೊಂಡ ಹಿನ್ನೆಲೆ ಇಂದು ಪರೀಕ್ಷೆ ಮಾಡಿಸಿಕೊಂಡ ವೇಳೆ ಕೋವಿಡ್ ದೃಢಪಟ್ಟಿದೆ. ಶಾಸಕರ ಚಾಲಕ ಹಾಗೂ ಗನ್ ಮ್ಯಾನ್ ಅವರನ್ನು ಪರೀಕ್ಷೆಗೆ ಒಳಪಡಿಸಿದ್ದು, ವರದಿ ಬರಬೇಕಿದೆ.


ಸುರಪುರ ಬಿಜೆಪಿ ಶಾಸಕ ರಾಜುಗೌಡ ಸಹ ಕಳೆದ ಹಲವು ದಿನಗಳಿಂದ ಮಸ್ಕಿಯ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು. ಇಂದು ಸೋಂಕು ತಗುಲಿದ್ದು ಖಚಿತವಾಗಿದೆ. ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕಳೆದ ಕೆಲ ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದವರು ಕೊರೊನಾ ಚಿಕಿತ್ಸೆಗೆ ಒಳಗಾಗುವಂತೆ ಮನವಿ ಮಾಡಿಕೊಂಡಿದ್ದಾರೆ.

ಎರಡು ದಿನಗಳ ಹಿಂದೆ ಮಸ್ಕಿ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರಿಗೂ ಸೋಂಕು ತಗುಲಿದ್ದು, ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ. ಮಂಗಳವಾರ ಪ್ರತಾಪ್ ಗೌಡ ಪಾಟೀಲ್ ಪರವಾಗಿ ಕಣ್ಣೇ ಅದಿರಿಂದಿ ಖ್ಯಾತಿಯ ಗಾಯಕಿ ಮಂಗ್ಲಿ ಪ್ರಚಾರ ನಡೆಸಿದ್ದರು.

ಕೊರೊನಾ ಸೊಂಕು ಒಂದೆಡೆ ಹೆಚ್ಚಾಗುತ್ತಿದೆ. ರಾಜಕೀಯ ಅನೇಕ ನಾಯಕರುಗಳಿಗೆ ಸೋಂಕು ಕಾಣಿಸಿಕೊಳ್ಳುತ್ತಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಹಾಗೂ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರಿಗೆ ಕೊರೊನಾ ಪಾಸಿಟಿವ್ ಇಂದು ಕಾಣಿಸಿಕೊಂಡಿದೆ. ಸಂಪರ್ಕದಲ್ಲಿ ಇರುವವರಿಗೆ ಕೊರೊನಾ ಪರೀಕ್ಷೆ ಮಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *