12 ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಸಮರ- ಸರ್ಕಾರಕ್ಕೆ ಡೆಡ್‍ಲೈನ್ ಕೊಟ್ಟ ಕೋಡಿಹಳ್ಳಿ

ಬೆಂಗಳೂರು: ಸಾರಿಗೆ ನೌಕರರ ಮುಷ್ಕರ 12ನೇ ದಿನಕ್ಕೆ ಕಾಲಿಟ್ಟಿದೆ. ಇತ್ತ ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷ ಸರ್ಕಾರಕ್ಕೆ ಸೋಮವಾರದವರೆಗೆ ಡೆಡ್‍ಲೈನ್ ಕೊಟ್ಟಿದ್ದಾರೆ.

ಸಾರಿಗೆ ಕೆಲಸಗಾರರ ಬಗ್ಗೆ ಸರ್ಕಾರ ತಿರಸ್ಕಾರ ಭಾವನೆ ತೋರಿಸುತ್ತಿದೆ. ಇದರಿಂದ ನೌಕರರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ನೀವುಗಳು ವಿಶ್ರಾಂತಿ ಪಡೆಯಲು ಕೊರೊನಾ ತೋರಿಸುತ್ತಿದ್ದೀರಿ. ಸಮಸ್ಯೆ ಬಗ್ಗೆ ಮುಕ್ತ ಮಾತುಕತೆ ಮಾಡಿ ಬಗೆಹರಿಸಬೇಕು. ಸರ್ಕಾರ ದೌರ್ಜನ್ಯದ ಮಾರ್ಗ ಅನುಸರಿಸುತ್ತಿದೆ. ಹಲವಾರು ನೌಕರರನ್ನ ಕಾರಣ ಕೊಡದೇ ಅರೆಸ್ಟ್ ಮಾಡಿ, ಭಯೋತ್ಪಾದಕರಾಗಿ ನೋಡಲಾಗುತ್ತಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಆಕ್ರೋಶ ವ್ಯಕ್ತಪಡಿಸಿದರು.

ಸೋಮವಾರದ ನಂತರ ಮುಷ್ಕರ ಮತ್ತಷ್ಟು ತೀವ್ರಗೊಳ್ಳಲಿದೆ. 1 ಲಕ್ಷಕ್ಕೂ ಹೆಚ್ಚು ಜನರು ಜೈಲಿಗೆ ಹೋಗಲು ಸಿದ್ಧರಿದ್ದಾರೆ. ಸೋಮವಾರದ ನಂತರ ಜೈಲ್ ಬರೋ ಚಳುವಳಿ ಆರಂಭ ಮಾಡುತ್ತೆ ಎಂದು ಸರ್ಕಾರಕ್ಕೆ ಸಂದೇಶ ರವಾನಿಸಿದರು.

Comments

Leave a Reply

Your email address will not be published. Required fields are marked *