ಸಂಕಷ್ಟದಲ್ಲಿರೋ ಕಲಾವಿದರ ಕುಟುಂಬಕ್ಕೆ ನಟ ಉಪೇಂದ್ರ ನೆರವು

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ನಿಂದ ಇಡೀ ದೇಶ ತತ್ತರಿಸಿ ಹೋಗಿದೆ. ಜನ ಒಂದೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಇತ್ತ ಲಾಕ್ ಡೌನ್ ಪರಿಣಾಮ ಚಿತ್ರೀಕರಣ ಕೂಡ ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಂಕಷ್ಟಕ್ಕೀಡಾಗಿರುವ ಚಿತ್ರರಂಗದ ಕಾರ್ಮಿಕರು ಹಾಗೂ ಕಲಾವಿದರ ನೆರವಿಗೆ ನಟ ಉಪೇಂದ್ರ ಮುಂದಾಗಿದ್ದಾರೆ.

ಈ ಸಂಬಂಧ ಸ್ವತಃ ಉಪೇಂದ್ರ ಅವರೇ ಟ್ವೀಟ್ ಮೂಲಕ ತಿಳಿಸಿದ್ದಾರೆ. ಸುಮಾರು ಮೂರು ಸಾವಿರ ಕುಟುಂಬಕ್ಕೆ ಅಭಿಮಾನಿಗಳ ಆಶೀರ್ವಾದದಿಂದ ದಿನಸಿ ಕಿಟ್ ನೀಡಲು ನಿರ್ಧರಿಸಿದ್ದೇನೆ ಎಂಬ ಮಾಹಿತಿ ಹಂಚಿಕೊಂಡಿದ್ದಾರೆ.

ಟ್ವೀಟ್‍ನಲ್ಲೇನಿದೆ..?
ಕನ್ನಡ ಚಲನಚಿತ್ರ ರಂಗದ ಸಾವಿರಾರು ಕಾರ್ಮಿಕರು, ಕಲಾವಿದರು ಕೆಲಸವಿಲ್ಲದೇ ಕೋವಿಡ್ ಹೊಡೆತಕ್ಕೆ ತತ್ತರಿಸಿ ಹೋಗಿದ್ದಾರೆ. ಈ ಕಾರಣ, ಒಕ್ಕೂಟದ ಎಲ್ಲಾ ಸಂಘಗಳ ಸುಮಾರು ಮೂರು ಸಾವಿರ ಕುಟುಂಬಕ್ಕೆ ಅಭಿಮಾನಿಗಳ ಆಶೀರ್ವಾದದಿಂದ ದಿನಸಿ ಕಿಟ್ ನೀಡಲು ನಿರ್ಧರಿಸಿದ್ದೇನೆ. ವಿತರಣೆ ಬಗ್ಗೆ ತಮ್ಮ ತಮ್ಮ ಸಂಘದ ಮುಖ್ಯಸ್ತರನ್ನು ಸಂಪರ್ಕಿಸಿ ಎಂದು ಬರೆದುಕೊಂಡಿದ್ದಾರೆ.

ನಿನ್ನಯಷ್ಟೇ ನಟಿ ಲೀಲಾವತಿ ಹಾಗೂ ಅವರ ಮಗ ನಟ ವಿನೋದ್ ಕುಮಾರ್ ಕೂಡ ನೂರಾರು ಕುಟುಂಬಗಳಿಗೆ ನೆರವಾಗಿದ್ದಾರೆ. ಬೆಂಗಳೂರಿನ ಸುಮ್ಮನಹಳ್ಳಿಯ ಬಳಿ ಕಲಾವಿದರ ಕುಟುಂಬಕ್ಕೆ ದಿನಸಿ ಕಿಟ್ ವಿತರಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಸಿನಿಮಾದ ಹಿರಿಯ ಕಲಾವಿದರ ನೂರಾರು ಕುಟುಂಬಕ್ಕೆ 14 ದಿನಕ್ಕೆ ಆಗುವಂತೆ ದಿನಸಿ ಹಾಗೂ ತರಕಾರಿ ವಿತರಣೆ ಮಾಡಿದ್ದಾರೆ.

ಇಳಿ ವಯಸ್ಸಿನಲ್ಲಿ ಸಿನಿಮಾ ಕಲಾವಿದರ ನೆರವಿಗೆ ನಿಂತ ನಟಿ ಲೀಲಾವತಿ ಮಗ ವಿನೋದ್ ರಾಜ್ ಅವರು ತಮ್ಮ ತೋಟದಲ್ಲಿ ಸ್ವತಃ ಬೆಳೆದ ತರಕಾರಿ ಹಣ್ಣುಗಳ ವಿತರಣೆ ಮಾಡಿದ್ದಾರೆ. ಜೀವನದುದ್ದಕ್ಕೂ ನೆರವಿನ ಸಹಾಯವನ್ನು ತಾಯಿ-ಮಗ ಮಾಡುತ್ತಿದ್ದಾರೆ.

Comments

Leave a Reply

Your email address will not be published. Required fields are marked *