ಹಾಸನ: ರಾಜ್ಯದಲ್ಲಿ ಹಣಕಾಸು ಸ್ಥಿತಿ ಹದಗೆಟ್ಟಿದೆ, ಆದರೂ ಬಡವರ ಅನುಕೂಲಕ್ಕೆ ಪ್ಯಾಕೇಜ್ ಘೋಷಣೆ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಹಾಸನದ ಬೂವನಹಳ್ಳಿ ಹೆಲಿಪ್ಯಾಡ್ ನಲ್ಲಿ ಮಾತನಾಡಿದ ಅವರು, ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಕೋವಿಡ್ ಪರಿಸ್ಥಿತಿ ಸಭೆ ನಡೆಸುತ್ತೇವೆ. ಇಂದು ಹಾಸನಕ್ಕೆ ಬಂದಿದ್ದೇನೆ. ಹಾಸನ ಜಿಲ್ಲೆ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಹೆಚ್ಚಿದೆ ಎಂದರು. ಇದನ್ನೂ ಓದಿ : 11 ಸಾವಿರ ಕೋಟಿ ಜಿಎಸ್ಟಿ ಪರಿಹಾರ ಮೊತ್ತ ಬಿಡುಗಡೆ ಮಾಡಿ – ಬೊಮ್ಮಾಯಿ

ಕೋವಿಡ್ನಿಂದ ಜನ ಸಾವಿಗೀಡಾಗುತ್ತಿರುವುದಕ್ಕೆ ಸರ್ಕಾರವೇ ಕಾರಣ ಎಂಬ ರೇವಣ್ಣ ಹೇಳಿಕೆಗೆ ಕಿಡಿಕಾರಿದ ಸಿಎಂ, ಜವಾಬ್ದಾರಿಯುತ ಶಾಸಕರಾಗಿ ಬೇಜವಾಬ್ದಾರಿ ಹೇಳಿಕೆ ನೀಡಬಾರದು. ಅವರೂ ಕೂಡ ಶಾಸಕರಾಗಿ ಕೆಲಸ ನಿರ್ವಹಿಸಬೇಕಿದೆ. ಅವರ ಕೆಲಸ ನಿರ್ವಹಿಸದೆ ಬೇರೆಯವರ ಬಗ್ಗೆ ಬೊಟ್ಟು ತೋರಿಸಬಾರದು ಎಂದು ಕಿಡಿಕಾರಿದರು. ಇದನ್ನೂ ಓದಿ:ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ದೋಷ ಇದ್ಯಾ? – ಕೆಲ ನಿಮಿಷದಲ್ಲಿ ಸರಿ ಮಾಡಿ

ಕೊರೊನಾ ಮೂರನೇ ಅಲೆ ಬಗ್ಗೆ ಯಾವುದೇ ಅನಾಹುತ ಆಗದಂತೆ ಸಿದ್ಧತೆ ಮಾಡುತ್ತಿದ್ದೇವೆ. ಕೋವಿಡ್ ಬಗ್ಗೆ ಸುಳ್ಳು ಲೆಕ್ಕ ಕೊಡುತ್ತಿದ್ದಾರೆ ಎಂಬ ವಿರೋಧ ಪಕ್ಷದ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೋವಿಡ್ ಸುಳ್ಳು ಲೆಕ್ಕ ಕೊಡುತ್ತೇವೆ ಅಂದಿದ್ದು ಯಾರು? ಅದರಿಂದ ನಮಗೇನು ಲಾಭ ಎಂದು ಪ್ರಶ್ನಿಸಿದರು. ಇದನ್ನೂ ಓದಿ:ಖಾಸಗಿ ಆಸ್ಪತ್ರೆಗಳಿಗೆ ಕೇಂದ್ರ ಸರ್ಕಾರದಿಂದ ಲಸಿಕೆ ದರ ಪ್ರಕಟ- ಯಾವ ಲಸಿಕೆಗೆ ಎಷ್ಟು ರೂಪಾಯಿ?
ರಮೇಶ್ ಜಾರಕಿಹೋಳಿ ಪ್ರಕರಣದಲ್ಲಿ ಕಾನೂನು ಅದರದೆ ಆದ ಕ್ರಮ ಕೈಗೊಳ್ಳುತ್ತದೆ. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ. ದೇವೇಗೌಡರ ಅಪೇಕ್ಷೆಯಂತೆ ಸದ್ಯದಲ್ಲೇ ಹಾಸನ ವಿಮಾನ ನಿಲ್ದಾಣ ನಿರ್ಮಾಣದ ಕೆಲಸ ಆರಂಭಿಸುತ್ತೇವೆ ಎಂದು ತಿಳಿಸಿದರು.

Leave a Reply