ಭಿನ್ನರ ಬ್ಲಾಸ್ಟಿಂಗ್ ಹೇಳಿಕೆಗಳ ಬೆನ್ನಲ್ಲೇ ಬಿಜೆಪಿಯಲ್ಲಿ ಚುರುಕಿನ ಬೆಳವಣಿಗೆ

ಬೆಂಗಳೂರು: ಭಿನ್ನರ ಬ್ಲಾಸ್ಟಿಂಗ್ ಹೇಳಿಕೆಗಳ ಬೆನ್ನಲ್ಲೇ ಬಿಜೆಪಿಯಲ್ಲಿ ಚುರುಕಿನ ಬೆಳವಣಿಗೆ ನಡುವೆ ಹೈಕಮಾಂಡ್ ಕರೆ ಹಿನ್ನೆಲೆ ಸಚಿವ ಮುರುಗೇಶ್ ನಿರಾಣಿ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಬುಲಾವ್ ಬೆನ್ನಲ್ಲೇ ತಮ್ಮ ಇಂದಿನ ದಾವಣಗೆರೆ, ಕಲಬುರಗಿ, ಬಳ್ಳಾರಿ ಜಿಲ್ಲಾ ಪ್ರವಾಸ ಮೊಟಕುಗೊಳಿಸಿದ ಸಚಿವರು ಬೆಳಗ್ಗೆ 11 ಗಂಟೆಗೆ ದೆಹಲಿ ವಿಮಾನ ಏರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇಂದು ಬೆಳಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೇ ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಆದ್ರೆ ದೆಹಲಿ ಪ್ರವಾಸದ ಕುರಿತು ಪ್ರತಿಕ್ರಿಯೆ ನೀಡಿರುವ ಮುರುಗೇಶ್ ನಿರಾಣಿ, ಹೈಕಮಾಂಡ್ ನಿಂದ ಯಾವುದೇ ಸಂದೇಶ ಬಂದಿಲ್ಲ. ವೈಯಕ್ತಿಕ ಕೆಲಸದ ಹಿನ್ನೆಲೆ ದೆಹಲಿಗೆ ಬಂದಿದ್ದು, ಸಂಜೆಯೇ ಬೆಂಗಳೂರಿಗೆ ಮರಳುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯದಲ್ಲಿ ಯಡಿಯೂರಪ್ಪ, ವಿಜಯೇಂದ್ರ ಸೇರಿ ಇಬ್ಬರು ಸಿಎಂಗಳು: ಸಲೀಂ ಅಹ್ಮದ್

ಬೆಂಗಳೂರಿನಿಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮತ್ತು ಮುರುಗೇಶ್ ನಿರಾಣಿ ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ಆದ್ರೆ ದೆಹಲಿಯಲ್ಲಿ ಇಬ್ಬರೂ ಪ್ರತ್ಯೇಕ ಕಾರ್ ನಲ್ಲಿ ಹೋಗಿದ್ದಾರೆ. ಸಚಿವ ಸುಧಾಕರ್ ಕೇಂದ್ರ ಆರೋಗ್ಯ ಸಚಿವರ ಭೇಟಿಗೆ ದೆಹಲಿಗೆ ತೆರಳಿದ್ದಾರೆ. ಇದನ್ನೂ ಓದಿ: ಹಮಾರ ಕುತ್ತಾ ಹಮಾರ ಗಲ್ಲಿ ಮೇ ಷೇರ್ ತರಹ ಬಿಎಸ್‌ವೈ: ಸಿದ್ದರಾಮಯ್ಯ

Comments

Leave a Reply

Your email address will not be published. Required fields are marked *