20 ವರ್ಷ ಹಿಂದಕ್ಕೆ ಹೋಗಿದ್ದೇವೆ, ಅನ್ಯಾಯ ಸರಿಪಡಿಸಲಿ: ಡಿಕೆಶಿ

ಬೆಂಗಳೂರು: ಎರಡು ವರ್ಷದಲ್ಲಿ ರಾಜ್ಯಕ್ಕೆ ಏನು ಅನ್ಯಾಯ ಆಗಿದೆ ಅದನ್ನು ಬೊಮ್ಮಾಯಿ ಸರಿಪಡಿಸಬಹುದು ಅಂತಾ ಅಂದುಕೊಂಡಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಅಭಿನಂದನೆಗಳು. ಬೊಮ್ಮಾಯಿ ಅವರು ರಾಜ್ಯಕ್ಕೆ ನ್ಯಾಯ ನೀಡಿ ಒಳ್ಳೆ ಆಡಳಿತ ಕೊಡಲಿ ಎಂದು ಈ ಸಂದರ್ಭದಲ್ಲಿ ಶುಭ ಹಾರೈಸುತ್ತೇನೆ ಎಂದರು. ಇದನ್ನೂ ಓದಿ : ನಿರಾಣಿ, ಬೆಲ್ಲದ್‍ಗೆ ಸಿಎಂ ಕುರ್ಚಿ ತಪ್ಪಿದ್ದು ಹೇಗೆ? 

ಪರೀಕ್ಷೆ ಬರೆದಿದ್ದೇವೆ ಎಂದು ಮಂತ್ರಿಗಳು, ಶಾಸಕರು ಹೇಳುತ್ತಿದ್ದರು. ರಾಜ್ಯ ಎರಡು ವರ್ಷದಲ್ಲಿ 20 ವರ್ಷದ ಹಿಂದಕ್ಕೆ ಹೋಗಿದೆ. ಕೇಂದ್ರದಿಂದ ಅನ್ಯಾವಾಗಿದೆ ಎಂದು ಹೇಳಿ ಬಿಜೆಪಿ ಸರ್ಕಾರವನ್ನು ಆಡಳಿತವನ್ನು ಟೀಕಿಸಿದರು.  ಇದನ್ನೂ ಓದಿ : ಲಾಬಿ ಮಾಡದ ಬೊಮ್ಮಾಯಿಗೆ ಒಲಿಯಿತು ಅದೃಷ್ಟ

ಕೇಂದ್ರ ಸರ್ಕಾರ ನೀರಾವರಿ, ಹಣಕಾಸು ಯಾವುದಕ್ಕೂ ಸಹಕಾರ ಕೊಡಲಿಲ್ಲ. ಕ್ಯಾಬಿನೆಟ್ ರಚನೆ ಮಾಡಲು ಬಿಡಲಿಲ್ಲ. ಮಾಜಿ ಮುಖ್ಯಮಂತ್ರಿಗಳು ಕಣ್ಣೀರು ಹಾಕಿದ್ದನ್ನು ನೋಡಿದ್ದೇವೆ. ಮಾಜಿ ಮುಖ್ಯಮಂತ್ರಿಗಳು ಇವರ ಹೆಸರನ್ನು ಸೂಚಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ನೋಡಿದ್ದೇವೆ ಎಂದು ಹೇಳಿದರು.

 

Comments

Leave a Reply

Your email address will not be published. Required fields are marked *