ವಿಜಯೇಂದ್ರಗೆ ಸಂಪುಟದಲ್ಲಿ ಸ್ಥಾನ – ಬೊಮ್ಮಾಯಿ ಹೇಳಿದ್ದೇನು?

ನವದೆಹಲಿ: ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅಧಿಕಾರ ಸ್ವೀಕರಿಸಿದ ಬಳಿಕ ಇದೀಗ ಎರಡನೇ ಬಾರಿಗೆ ದೆಹಲಿಗೆ ತೆರಳಿದ್ದಾರೆ. ಸಂಪುಟ ರಚನೆ ಕಸರತ್ತು ನಡೆಯುತ್ತಿದ್ದು, ಇಂದು ರಾತ್ರಿಯೇ ಈ ಬಗ್ಗೆ ನಿರ್ಣಯ ಆಗಲಿದೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಸಂಜೆ ಪಕ್ಷದ ಸಭೆ ನಡೆಯಲಿದೆ. ಸಂಪುಟ ರಚನೆ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಮಾಜಿ ಸಚಿವರು ಶಾಸಕರ ಜೊತೆಗೆ ಚರ್ಚೆ ಮಾಡಿದ್ದೀನಿ. ಈಗಿನ ರಾಜಕೀಯ ಸನ್ನಿವೇಶದಲ್ಲಿ ಎಲ್ಲರನ್ನೂ ಒಟ್ಟು ತೆಗೆದುಕೊಂಡು ಹೋಗುವ ಪ್ರಯತ್ನ ಮಾಡಬೇಕಿದೆ ಎಂದರು.

ಎಲ್ಲ ಶಾಸಕರಿಗೂ ಮಂತ್ರಿಯಾಗಲು ಸಾಧ್ಯವಿಲ್ಲ ಎಂದು ಗೊತ್ತಿದೆ. ಪ್ರಾದೇಶಿಕ ಭಾಗವನ್ನು ಗಮನದಲ್ಲಿಟ್ಟುಕೊಂಡು ರಚನೆ ಮಾಡಲಾವುದು. ಇಂದು ಅಂತಿಮ ಸ್ವರೂಪಕ್ಕೆ ಬರಲಿದೆ. ಎಷ್ಟು ಹಂತದಲ್ಲಿ ಮಾಡಬೇಕು ಎಷ್ಟು ಜನರ ಇರಬೇಕು ಎಂದು ಇವತ್ತು ಚರ್ಚೆ ಆಗಲಿದೆ. ಇಂದು ರಾತ್ರಿಯೇ ನಿರ್ಣಯವಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿ ಹೈಕಮಾಂಡ್ ಮುಂದೆ ‘ವಿಜಯ’ ಪ್ರಸ್ತಾಪದ ಇನ್‍ಸೈಡ್ ಸ್ಟೋರಿ

ನಾಳೆ ಬೆಂಗಳೂರು ವಾಪಸ್ ಹೋದ್ರೆ ನಾಡಿದ್ದು ಸಂಪುಟ ರಚನೆ ಪಕ್ಕಾ. ಸದ್ಯ ಅಮಿತ್ ಶಾ ಭೇಟಿಗೆ ಪ್ರಯತ್ನ ಮಾಡುತ್ತೇನೆ. ಇನ್ನು ವಿಜಯೇಂದ್ರ ಸಂಪುಟದಲ್ಲಿ ಇರುವ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದು ಬೊಮ್ಮಾಯಿ ತಿಳಿಸಿದರು.

Comments

Leave a Reply

Your email address will not be published. Required fields are marked *