ಭಾರತ ಸೇನೆಯ ಹೆಲಿಕಾಪ್ಟರ್ ಪತನ- ಓರ್ವ ಯೋಧ ಹುತಾತ್ಮ

ಶ್ರೀನಗರ: ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರ್ ಒಂದು ಜಮ್ಮು, ಕಾಶ್ಮೀರದ ಕಥುವಾ ಜಿಲ್ಲೆಯ ಲಖನಪುರ ಎಂಬಲ್ಲಿ ಪತನಗೊಂಡು ಓರ್ವ ಯೋಧ ಹುತಾತ್ಮರಾಗಿದ್ದಾರೆ.

ಎಚ್‍ರೆಲ್ ಧ್ರುವ್ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಕಂಡು ಬಂದ ತಾಂತ್ರಿಕ ದೋಷದಿಂದ ಪತನಗೊಂಡಿದೆ. ಹೆಲಿಕಾಪ್ಟರ್‍ ನಲ್ಲಿ ಇಬ್ಬರು ಪೈಲೆಟ್‍ಗಳಿದ್ದರು ಅದರಲ್ಲಿ ಓರ್ವ ಯೋಧ ಮೃತಪಟ್ಟು. ಇನ್ನೊಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ಸ್ಥಳೀಯ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕಾಫಿ ವ್ಯಾಪಾರದಲ್ಲಿ ನಷ್ಟ – ಚಿಕ್ಕಮಗಳೂರು ಮೂಲದ ಉದ್ಯಮಿ ಆತ್ಮಹತ್ಯೆ

ಪಠಾಣ್‍ಕೋಟ್‍ನಿಂದ ಬರುತ್ತಿದ್ದ ಹೆಲಿಕಾಪ್ಟರ್‍ ನ್ನು ಲಖನಪುರದಲ್ಲಿ ಲ್ಯಾಂಡಿಂಗ್ ವೇಳೆ ಈ ಘಟನೆ ಸಂಭವಿಸಿದೆ. ಕೂಡಲೇ ಇಬ್ಬರು ಪೈಲೆಟ್‍ಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರು. ಯೋಧರೊಬ್ಬರು ಮೃತಪಟ್ಟು, ಇನ್ನೊಬ್ಬರು ತೀವ್ರ ಗಾಯಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೆಲ ದಿನಗಳ ಹಿಂದೆ ಮಿಗ್ -21 ಬೈಸನ್ ಹೆಸರಿನ ಯುದ್ಧ ವಿಮಾನ ಶ್ರೀ ಗಂಗಾನಗರದ ಸುರತ್‍ಗ್ರಹ ವಾಯುನೆಲೆಯಲ್ಲಿ ಪತನಗೊಂಡಿತ್ತು. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ.

Comments

Leave a Reply

Your email address will not be published. Required fields are marked *