ಆಗಸ್ಟ್ 10 ರಂದು ದೇಶಾದ್ಯಂತ ವಿದ್ಯುತ್ ನೌಕರರ ಮುಷ್ಕರ

ಬೆಂಗಳೂರು: ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಆಗಸ್ಟ್ 10ರಂದು ದೇಶಾದ್ಯಂತ ವಿದ್ಯುತ್ ನೌಕರರು ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ.

ವಿದ್ಯುತ್ ಖಾಸಗೀಕರಣ ವಿರೋಧಿಸಿ ನೌಕರರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ವಿದ್ಯುತ್ ಕಂಪನಿಗಳನ್ನು ಸರ್ಕಾರ ಖಾಸಗೀಕರಣ ಮಾಡಲು ಹೊರಟಿರುವ ಕ್ರಮ ವಿರೋಧಿಸಿ ದೇಶಾದ್ಯಂತ ಈ ಪ್ರತಿಭಟನೆ ನಡೆಯಲಿದೆ ಎಂದು ನೌಕರರ ಸಂಘಟನೆಗಳು ತಿಳಿಸಿವೆ.

ವಿದ್ಯುತ್ ಕಂಪನಿಗಳಿಂದ ಆಗಿರುವ ಲಕ್ಷಾಂತರ ಕೋಟಿ ನಷ್ಟವನ್ನು ಸರಿದೂಗಿಸುವ ನೆಪದಲ್ಲಿ ಕೇಂದ್ರ ಸರ್ಕಾರ ಖಾಸಗೀಕರಣಕ್ಕೆ ಮುಂದಾಗಿದೆ. ಖಾಸಗೀಕರಣದಿಂದ ರೈತರು, ಬಡವರಿಗೆ ತೀವ್ರ ಸಂಕಷ್ಟ ಎದುರಾಗಲಿದೆ. ವಿದ್ಯುತ್ ಕಾಯ್ದೆ ತಿದ್ದುಪಡಿಯಿಂದ ಬಡವರಿಗೆ ಹಾಗೂ ರೈತರಿಗೆ ನೀಡುತ್ತಿರುವ ಭಾಗ್ಯಜ್ಯೋತಿ ಉಚಿತ ಯೋಜನೆಗೆ ಬ್ರೇಕ್ ಬೀಳುವ ಸಾಧ್ಯತೆಯಿದೆ ಎಂದು ಸಂಘಟನೆಗಳು ಹೇಳಿವೆ.

ಕೇಂದ್ರ ಸರ್ಕಾರ ಈಗಾಗಲೇ ಹಲವು ವಲಯಗಳನ್ನು ಖಾಸಗೀಕರಣ ಮಾಡಿದೆ. ಅದೇ ರೀತಿ ವಿದ್ಯುತ್ ಕಂಪನಿಗಳನ್ನು ಖಾಸಗೀಕರಣ ಮಾಡಲು ಮುಂದಾಗಿದೆ. ಇದನ್ನು ವಿರೋಧಿಸಿ ಆ.10ರಂದು ನಡೆಸಲಾಗುತ್ತಿರುವ ಮುಷ್ಕರಕ್ಕೆ ಹಲವು ಸಂಘ-ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸಿವೆ. ಇದನ್ನೂ ಓದಿ:ಭಾರತ ಸೇನೆಯ ಹೆಲಿಕಾಪ್ಟರ್ ಪತನ- ಓರ್ವ ಯೋಧ ಹುತಾತ್ಮ

Comments

Leave a Reply

Your email address will not be published. Required fields are marked *