ಬೆಂಗಳೂರು: ಸಿನಿಮಾದ ಶೂಟಿಂಗ್ ಸಮಯದಲ್ಲಿ ಫೈಟರ್ ವಿವೇಕ್ ದುರಂತ ಸಾವಿಗೆ ನಟಿ ರಚಿತಾ ರಾಮ್ ಸಂತಾಪ ಸೂಚಿಸಿದ್ದಾರೆ.
ಈ ಸಂಬಂಧ ಇನ್‍ಸ್ಟಾದಲ್ಲಿ ಪೋಸ್ಟ್ ಹಾಕಿರುವ ನಟಿ, ವಿವೇಕ್ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಅಮ್ಮ ನಿನ್ನ ಚೆನ್ನಾಗಿ ನೋಡ್ಕೋತ್ತೀನಿ ಅಂದ್ಬಿಟ್ಟು ರಸ್ತೆಯಲ್ಲೇ ಬಿಟ್ಟೋದ: ವಿವೇಕ್ ತಾಯಿ ಕಣ್ಣೀರು
”ವಿದ್ಯುತ್ ಅವಘಡದಿಂದ ಸಾವನ್ನಪ್ಪಿದ ಫೈಟರ್ ವಿವೇಕ್ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಹಾಗೆಯೇ ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ನಟಿ ತಿಳಿಸಿದ್ದಾರೆ.
View this post on Instagram
ನಿನ್ನೆ ಬಿಡದಿ ಬಳಿಯ ತೋಟದಲ್ಲಿ ನಟ ಅಜಯ್ ರಾವ್ ಹಾಗೂ ರಚಿತಾ ರಾಮ್ ಅಭಿನಯದ ‘ಲವ್ ಯೂ ರಚ್ಚು’ ಸಿನಿಮಾದ ಸಾಹಸ ದೃಶ್ಯದ ಚಿತ್ರೀಕರಣ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ವಿದ್ಯುದಾಘಾತದಿಂದ ಫೈಟರ್ ವಿವೇಕ್ ಸಾವನ್ನಪ್ಪಿದ್ದರು. ಇನ್ನೊಬ್ಬ ಫೈಟರ್ ರಂಜಿತ್ ಸ್ಥಿತಿ ಗಂಭೀರವಾಗಿದ್ದು, ಸಾವು- ಬದುಕಿನ ಹೋರಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಹೈಟೆನ್ಷನ್ ವೈರ್ ತಗುಲಿದ್ದರಿಂದ ಫೈಟರ್ ಸಾವಾಯ್ತು: ನಟ ಅಜಯ್ ರಾವ್

ಶೂಟಿಂಗ್ ವೇಳೆ 35 ವರ್ಷದ ಫೈಟರ್ ವಿವೇಕ್ ಧರಿಸಿದ್ದ ಲೋಹದ ಹಗ್ಗ, ಹೈಟೆನ್ಶನ್ ವೈರ್ ತಗುಲಿ ಈ ದುರಂತ ಸಂಭವಿಸಿದೆ. ಗುರು ದೇಶಪಾಂಡೆ ನಿರ್ಮಾಣದ ಈ ಸಿನಿಮಾಗೆ ಫೈಟ್ ಮಾಸ್ಟರ್ ವಿನೋದ್ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದರು. ಇದನ್ನೂ ಓದಿ: ಲವ್ ಯೂ ರಚ್ಚು ದುರಂತ – ಜೆಸಿಬಿ ಡ್ರೈವರ್ ಸೇರಿ ಐವರ ಮೇಲೆ FIR

Leave a Reply