ಕೃಷಿ ಕಾಯ್ದೆ ವಿರುದ್ಧ ಹೋರಾಟ ಮಾಡುತ್ತಿರುವವರು ರೈತರಲ್ಲ, ಮಧ್ಯವರ್ತಿಗಳು: ಶೋಭಾ ಕರಂದ್ಲಾಜೆ

ಚಾಮರಾಜನಗರ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವವರು ರೈತರೇ ಅಲ್ಲ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲು ಚಾಮರಾಜನಗರದಲ್ಲಿ ಹಮ್ಮಿಕೊಂಡಿದ್ದ ಜನಾಶೀರ್ವಾದ ಯಾತ್ರೆ ಕಾರ್ಯಕ್ರಮದ ಬಳಿಕ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ಹಲವು ತಿಂಗಳಿಂದ ಹೋರಾಟ ಮಾಡುತ್ತಿರುವವರೆಲ್ಲಾ ಮದ್ಯವರ್ತಿಗಳೇ ಹೊರತು ರೈತರಲ್ಲ ಎಂದಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನ ಭಯೋತ್ಪಾದಕರ ಕೈಗೆ ಹೋಗುವುದು ಒಳ್ಳೆಯದಲ್ಲ: ಶೋಭಾ ಕರಂದ್ಲಾಜೆ

ಎಪಿಎಂಸಿ ಲಾಭಿಯ ಮದ್ಯವರ್ತಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ, ಎಪಿಎಂಸಿಗಳಲ್ಲಿ ಯಾರಿಗೆ ಲಾಭ ಸಿಗುತ್ತಿತ್ತೋ ಅವರು ಪ್ರತಿಭಟನೆ ಮಾಡುತ್ತಿದ್ದಾರೆ. ಪಂಜಾಬ್ ಮತ್ತು ಹರಿಯಾಣ ರಾಜ್ಯ ಗಳಲ್ಲಿ ಯಾರು ಹೆಚ್ಚು ಕಮಿಷನ್ ಹೊಡೆಯುತ್ತಿದ್ದಾರೋ ಅವರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕರ್ನಾಟಕದಲ್ಲೂ ನಡೆಯುತ್ತಿರುವ ಪ್ರತಿಭಟನೆಗಳು ರಾಜಕೀಯ ಪ್ರೇರಿತ ಎಂದು ಆರೋಪಿಸಿದ ಅವರು ಪ್ರತಿಭಟನೆ ಮಾಡುತ್ತಿರುವವರು ಹೇಳುತ್ತಿರುವುದರಲ್ಲಿ ಯಾವುದೇ ಹುರುಳಿಲ್ಲ ಎಂದಿದ್ದಾರೆ,

Comments

Leave a Reply

Your email address will not be published. Required fields are marked *