ಗ್ಯಾಂಗ್ ರೇಪ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಸೋಮಶೇಖರ್

ಮೈಸೂರು: ಗ್ಯಾಂಗ್ ರೇಪ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ.

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶೂಟೌಟ್ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಪೊಲೀಸರು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಸಾರ್ವಜನಿಕರ ಭಾವನೆಗೆ ಸರ್ಕಾರ ಸ್ಪಂದಿಸಬೇಕಾಗುತ್ತೆ. ಗ್ಯಾಂಗ್ ರೇಪ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಪರಿಶೀಲನೆಗೆ ಎಡಿಜಿಪಿ ಅವರನ್ನೇ ಸರ್ಕಾರ ನಿಯೋಜಿಸಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಮೈಸೂರಿಗೆ ಆಗಮಿಸಿ ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ರಾಖಿಗೆ ಕಚ್ಚಿದ ನಾಯಿ – ನಾನು ಅದನ್ನ ಕಚ್ತೀನಿ ಅಂದ ನಟಿ

ಎಡಿಜಿಪಿ ವರದಿ ನಂತರ ನಿರ್ಲಕ್ಷ್ಯದ ಬಗ್ಗೆ ಸರ್ಕಾರ ಕ್ರಮವನ್ನು ಕೈಗೊಳ್ಳುತ್ತೆ. ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ನಾವು ಬಿಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ದೀಪಿಕಾ ಪಡುಕೋಣೆ ತಾಯಿಯಾಗುತ್ತಿದ್ದಾರಾ?

Comments

Leave a Reply

Your email address will not be published. Required fields are marked *