ಬೆಂಗಳೂರಿಗೆ ಆಗಮಿಸಿದ ರಕ್ಷಣಾ ಸಚಿವ ರಾಜ್‍ನಾಥ್ ಸಿಂಗ್

ಬೆಂಗಳೂರು: ಕೇಂದ್ರ ರಕ್ಷಣಾ ಸಚಿವರಾದ ರಾಜ್‍ನಾಥ್ ಸಿಂಗ್ ಅವರು ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.

ಹೆಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಸದಸ್ಯರಾದ ಪಿ.ಸಿ.ಮೋಹನ್ ಹಾಗೂ ಮಾಜಿ ಸಚಿವರಾದ ಅರವಿಂದ ಲಿಂಬಾವಳಿ ರಕ್ಷಣಾ ಸಚಿವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು. ರಾಜ್‍ನಾಥ್ ಸಿಂಗ್, ರಾಜಭವನಕ್ಕೆ ಭೇಟಿ ನೀಡಿ ನಂತರ ಕೇಂದ್ರ ಸಂಸದೀಯ ವ್ಯವಹಾರ ಸಚಿವರಾದ ಪ್ರಹ್ಲಾದ್ ಜೋಶಿ ಅವರ ಪುತ್ರಿಯ ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಗೆ ಅಮಿತ್ ಶಾರನ್ನು ಆತ್ಮೀಯವಾಗಿ ಬರಮಾಡಿಕೊಂಡ ಸಿಎಂ

ಅಮಿತ್ ಶಾ ರಾಜ್ಯ ಪ್ರವಾಸ:
ಸೆಪ್ಟೆಂಬರ್ 2 ರಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ರಾಜ್ಯ ಪ್ರವಾಸಕೈಗೊಂಡಿದ್ದರು. ಲೋಕಸಭಾ ಅಧ್ಯಕ್ಷ ಓಂ ಪ್ರಕಾಶ್ ಬಿರ್ಲಾ ಹಾಗೂ ಕೇಂದ್ರ ಸರ್ಕಾರದ ಸಚಿವರುಗಳೊಂದಿಗೆ ಕರ್ನಾಟಕ ರಾಜ್ಯ ಪ್ರವಾಸ ಕೈಗೊಂಡಿದ್ದ ಅಮಿತ್ ಶಾ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ್ದರು. ಈ ವೇಳೆ ಬೊಮ್ಮಾಯಿ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಅವರನ್ನೆಲ್ಲ ಆತ್ಮೀಯವಾಗಿ ಬರಮಾಡಿಕೊಂಡರು. ಇದನ್ನೂ ಓದಿ: ರಾಜ್ಯಾದ್ಯಂತ ಮಳೆಯ ಅಬ್ಬರ – ಮತ್ತೆ ಪ್ರವಾಹ ಭೀತಿ

ಅಮಿತ್ ಶಾ ಅವರಿಗೆ ಶಾಲುಹೊದಿಸಿ, ಹಾರ ತೊಡಿಸಿದ ಸಿಎಂ ಲೇಖಕ ದೀಪಕ್ ಚೋಪ್ರಾ ಬರೆದಿರುವ ಬುದ್ಧ- ದ ಸ್ಟೋರಿ ಆಫ್ ಎನಲೈಟ್‍ಮೆಂಟ್ ಪುಸ್ತಕವನ್ನು ನೀಡಿದ್ದರು.

Comments

Leave a Reply

Your email address will not be published. Required fields are marked *