ಹಿಂದಿ ಹೇರಿಕೆ- ಭೂತ ದಹಿಸಿ ವಾಟಳ್ ಪ್ರತಿಭಟನೆ

ಬೆಂಗಳೂರು: ಹಿಂದಿ ಹೇರಿಕೆ ವಿರೋಧಿಸಿ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಭೂತ ದಹನ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟ ನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಮಾತನಾಡಿದ ವಾಟಳ್ ನಾಗರಾಜ್, ರಾಜ್ಯದಲ್ಲಿ ಕನ್ನಡಿಗರು ಆಡಳಿತ ನಡೆಸುತ್ತಿಲ್ಲ. ಜೊತೆಗೆ ರಾಜ್ಯದಲ್ಲಿರುವ ಶಾಸಕರು, ಸಂಸದರು ಯಾರೂ ಈ ಬಗ್ಗೆ ಚರ್ಚೆ ಮಾಡುತ್ತಿಲ್ಲ. ರಾಜ್ಯದಲ್ಲಿ ವಿರೋಧ ಪಕ್ಷವೂ ಸತ್ತಿದೆ. ಹಿಂದಿ ಹೇರಿಕೆ ವಿರೋಧಿಸಿ ರಾಜ್ಯಾದ್ಯಂತ ವಾಟಳ್ ಪಕ್ಷದಿಂದ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಆನೇಕಲ್ ರೇವ್ ಪಾರ್ಟಿ ಪ್ರಕರಣ- 35 ಜನರ ಬಂಧನ

ಸೆಪ್ಟೆಂಬರ್ 25 ಮತ್ತು 27ರಂದು ಕೋಲಾರ ಮತ್ತು ಚಾಮರಾಜನಗರದಲ್ಲಿ ಹಿಂದಿ ಹೇರಿಕೆ ವಿರೋಧಿಸಿ ಕಪ್ಪು ಬಾವುಟ ಪ್ರದರ್ಶನ ಮಾಡಲಾಗುತ್ತದೆ. ಈ ಬಗ್ಗೆ ನಿರಂತರ ಹೋರಾಟ ನಡೆಸಲಾಗುತ್ತದೆ ಎಂದು ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.

Comments

Leave a Reply

Your email address will not be published. Required fields are marked *