ಪಲ್ಸ್ ಪೋಲಿಯೋ ಮಾದರಿಯಲ್ಲಿ ಜಾನುವಾರುಗಳಿಗೆ ಲಸಿಕೆ: ಪ್ರಭು ಚವ್ಹಾಣ್

ಬೆಂಗಳೂರು: ಕರ್ನಾಟಕದಲ್ಲಿ ಪಲ್ಸ್ ಪೋಲಿಯೋ ಮಾದರಿಯಲ್ಲಿ ಕಾಲುಬಾಯಿ ರೋಗಕ್ಕೆ ವ್ಯವಸ್ಥಿತ ಲಸಿಕಾ ಅಭಿಯಾನ ನಡೆಸಲಾಗುವುದು ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ 78 ತಾಲೂಕುಗಳ 419 ಹಳ್ಳಿಗಳಲ್ಲಿ ಕಾಲುಬಾಯಿ ರೋಗ 4,475 ಜಾನುವಾರುಗಳಲ್ಲಿ ಕಂಡುಬಂದಿರುತ್ತದೆ. ಉಳಿದ ಜಾನುವಾರುಗಳು ಚಿಕಿತ್ಸೆಯಿಂದ ಗುಣಮುಖ ಆಗಿರುತ್ತವೆ. ಪಶುಸಂಗೋಪನೆ ಇಲಾಖೆಯ ವೈದ್ಯಾಧಿಕಾರಿಗಳು ನಿರಂತರವಾಗಿ ರೋಗ ಕಂಡುಬಂದ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ತೀವ್ರವಾಗಿ ನಿಗಾ ವಹಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ 57 ಹಸುಗಳು ಇಲ್ಲಿಯವರೆಗೆ ಮೃತಪಟ್ಟಿದ್ದು, 4066 ಜಾನುವಾರುಗಳು ಚಿಕಿತ್ಸೆಯಿಂದ ಗುಣಮುಖವಾಗಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಯತ್ನಾಳ್, ಬೆಲ್ಲದ್‍ಗೆ ಅಭಿನಂದನೆ ಸಲ್ಲಿಸಿದ ಜಯಮೃತ್ಯುಂಜಯ ಸ್ವಾಮೀಜಿ

ಕಾಲುಬಾಯಿ ರೋಗ ಕಂಡುಬಂದ 5 ಕೀ.ಮಿ ವ್ಯಾಪ್ತಿಯಲ್ಲಿ ರಿಂಗ್ ವ್ಯಾಕ್ಸಿನ್ ನಡೆಸಲಾಗುತ್ತಿದೆ. ಸದ್ಯ 4 ಲಕ್ಷಕ್ಕೂ ಹೆಚ್ಚು ಜಾನುವಾರುಗಳಿಗೆ ಲಸಿಕೆಯನ್ನು ನೀಡಲಾಗಿದೆ. ಇಲಾಖೆಯ ಉಪನಿರ್ದೇಶಕರು, ಸಹಾಯಕ ನಿರ್ದೇಶಕರು ಹಾಗೂ ಪಶುವೈದ್ಯಾಧಿಕಾರಿಗಳು ಕಾಲುಬಾಯಿ ರೋಗವನ್ನು ಆದ್ಯತೆಯ ಮೇಲೆ ಪರಿಗಣಿಸಿ ರೋಗ ನಿಯಂತ್ರಣಕ್ಕೆ ಶ್ರಮವಹಿಸಲು ಸೂಚಿಸಿದ್ದಾರೆ.

ಇಲಾಖೆಯ ಸಭೆ ನಡೆಸಿ ರೋಗ ಉಲ್ಬಣಗೊಳ್ಳದಂತೆ ನೋಡಿಕೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ರೈತರ ಜೀವನಾಧಾರವಾಗಿರುವ ಹಸುಗಳ ಆರೋಗ್ಯಕ್ಕೆ ಯಾವುದೇ ಸಂದರ್ಭಗಳಲ್ಲಿ ವೈದ್ಯರು ಸನ್ನದ್ಧರಿದ್ದು, ಆದ್ಯತೆ ಮೇಲೆ ಚಿಕಿತ್ಸೆ ನೀಡಲು ತಿಳಿಸಲಾಗಿದೆ. ಚಿಕಿತ್ಸೆ ನೀಡುವಲ್ಲಿ ಅಧಿಕಾರಿಗಳು ನಿರ್ಲಕ್ಷ ತೊರಿದ್ದುಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ:  ಅರ್ಚಕರಿಗೆ ಹಾಗೂ ದೇವಾಲಯ ನೌಕರರಿಗೆ ಆರೋಗ್ಯ ವಿಮೆ ಜಾರಿಗೊಳಿಸಲು ಶೀಘ್ರ ಕ್ರಮ: ಜೊಲ್ಲೆ

ಕಳೆದ ನವೆಂಬರ್ ಮತ್ತು ಡಿಸೆಂಬರ್ 2020ರ ವರೆಗೆ 17 ಸುತ್ತಿನ ಲಸಿಕಾ ಕಾರ್ಯಕ್ರಮ ನಡೆದಿದೆ. ಈ ಮೊದಲು ರಾಜ್ಯದಲ್ಲಿ 60:40 ಅನುಪಾತದಲ್ಲಿ ಲಸಿಕೆ ನೀಡಲಾಗುತ್ತಿತ್ತು. ಆದರೆ ಈಗ ರಾಜ್ಯಗಳಿಗೆ ಕೇಂದ್ರ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಲಸಿಕೆ ಪೂರೈಕೆ ಮಾಡುತ್ತಿರುವುದರಿಂದ ವಿಳಂಬವಾಗಿರುತ್ತದೆ. ಜೂನ್ ನಲ್ಲಿ ಲಸಿಕಾ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ದೇಶದ ಎಲ್ಲ ರಾಜ್ಯಗಳಲ್ಲಿ ಏಕ ಕಾಲಕ್ಕೆ ಲಸಿಕಾ ಕಾರ್ಯಕ್ರಮ ನಡೆಸುವ ಉದ್ದೇಶ ಕೇಂದ್ರ ಸರ್ಕಾರ ಹೊಂದಿರುವುದರಿಂದ ಲಸಿಕೆಯ ಪೂರೈಕೆಯಲ್ಲಿ ವಿಳಂಬವಾಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:  ಕಾರ್ಯಕರ್ತರನ್ನು ಮನೆ ಬಾಗಿಲಿಗೆ ಬರಮಾಡಿಕೊಳ್ಳಲಿದ್ದಾರೆ ಹೆಚ್‍ಡಿಕೆ

25 ಲಕ್ಷ ಡೋಸ್ ಪೂರೈಕೆ!
ತಿಂಗಳ ಅಂತ್ಯದವರೆಗೆ ಕೇಂದ್ರ ಸರ್ಕಾರದಿಂದ 25 ಲಕ್ಷ ಡೋಸ್ ಲಸಿಕೆ ಸರಬರಾಜು ಆಗುತ್ತಿದ್ದು, ಅವುಗಳನ್ನು ರೋಗೊದ್ರೇಕ ಕಂಡುಬಂದ ಜಿಲ್ಲೆಗಳಲ್ಲಿ ಆದ್ಯತೆ ಮೇರೆಗೆ ಪೂರೈಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *