ಪಾಕಿಸ್ತಾನದಲ್ಲಿ ಭೂಕಂಪ – 20 ಮಂದಿ ಸಾವು

earthquake-1

ಇಸ್ಲಾಮಾಬಾದ್: ದಕ್ಷಿಣ ಪಾಕಿಸ್ತಾನದಲ್ಲಿ ಗುರುವಾರ ಮುಂಜಾನೆ ಭೂಕಂಪ ಸಂಭವಿಸಿದ್ದು, ಸುಮಾರು 20 ಮಂದಿ ಸಾವನ್ನಪ್ಪಿದ್ದಾರೆ.

ಪಾಕಿಸ್ತಾನದಿಂದ 14 ಕಿ.ಮೀ ದೂರದಲ್ಲಿರುವ ಹರ್ನೈನ ಎನ್‍ಎನ್‍ಇಯಲ್ಲಿ ಇಂದು ಮುಂಜಾನೆ 3.30ರ ಸುಮಾರಿಗೆ 6.0 ತೀವ್ರತೆಯಲ್ಲಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಇದನ್ನೂ ಓದಿ: ಲಖೀಂಪುರ್ ಖೇರಿ ಹಿಂಸಾಚಾರ – ಮೃತ ರೈತರ ಕುಟುಂಬಸ್ಥರನ್ನು ಬಿಗಿದಪ್ಪಿ ರಾಹುಲ್, ಪ್ರಿಯಾಂಕಾ ಸಾಂತ್ವನ

ಘಟನೆಯಲ್ಲಿ ಸುಮಾರು 20 ಮಂದಿ ಸಾವನ್ನಪ್ಪಿದ್ದು, ಮೇಲ್ಛಾವಣಿ ಮತ್ತು ಗೋಡೆ ಕುಸಿತದಿಂದ ಮೃತಪಟ್ಟವರೆ ಹೆಚ್ಚಾಗಿದ್ದಾರೆ. ಅದರಲ್ಲಿಯೂ ಮೃತಪಟ್ಟ 20 ಜನರಲ್ಲಿ ಒಬ್ಬರು ಮಹಿಳೆ ಮತ್ತು ಆರು ಮಕ್ಕಳು ಅಂತ ಗುರುತಿಸಲಾಗಿದೆ ಎಂದು ಹಿರಿಯ ಪ್ರಾಂತೀಯ ಸರ್ಕಾರಿ ಅಧಿಕಾರಿ ಸುಹೇಲ್ ಅನ್ವರ್ ಹಶ್ಮಿ ಹೇಳಿದ್ದಾರೆ. ಇದನ್ನೂ ಓದಿ: ಶಾರೂಖ್ ಮಗನ ಅರೆಸ್ಟ್ ಹಿಂದೆ ಬಿಜೆಪಿ ಉಪಾಧ್ಯಕ್ಷ – NCB ಅಧಿಕಾರಿಗಳಿಂದ್ಲೇ ಪಿತೂರಿ ಆರೋಪ

ಸದ್ಯ ಭೂಕಂಪದಲ್ಲಿ 20 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಿದ್ದು, ಈ ಕುರಿತಂತೆ ಮತ್ತಷ್ಟು ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಪ್ರಾಂತೀಯ ಆಂತರಿಕ ಸಚಿವ ಮೀರ್ ಜಿಯಾ ಉಲ್ಲಾ ಲಾಂಗೌ ನುಡಿದಿದ್ದಾರೆ.

ಪ್ರಸ್ತುತ ಘಟನೆಯಲ್ಲಿ 15 ರಿಂದ 20 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆಯಾಗಬಹುದು ಎಂದು ಬಲೂಚಿಸ್ತಾನದ ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ ನಸೀರ್ ನಾಸರ್ ಹೇಳಿದ್ದಾರೆ. ಅಲ್ಲದೇ ಬಲೂಚಿಸ್ತಾನದ ದೂರದ ಪರ್ವತ ನಗರವಾದ ಹರ್ನೈನ ಹೆಚ್ಚು ಹಾನಿಗೊಳಗಾದ ಪ್ರದೇಶವಾಗಿದ್ದು, ಇಲ್ಲಿ ಸುಸಜ್ಜಿತವಾದ ರಸ್ತೆಗಳ ಕೊರತೆ, ವಿದ್ಯುತ್ ಮತ್ತು ಮೊಬೈಲ್ ಫೋನ್ ವ್ಯವಸ್ಥೆ ಇಲ್ಲದ ಕಾರಣ ರಕ್ಷಣಾ ಕಾರ್ಯಕ್ಕೆ ಅಡ್ಡಿಯಗುತ್ತಿರುವುದಾಗಿ ತಿಳಿಸಿದ್ದಾರೆ. ಇನ್ನೂ ಬಲೂಚಿಸ್ತಾನದ ಪ್ರಾಂತೀಯ ರಾಜಧಾನಿ ಕ್ವೆಟ್ಟಾದಲ್ಲಿಯೂ ಭೂಕಂಪದ ಅನುಭವವಾಗಿದೆ ಎಂದು ಹೇಳಲಾಗುತ್ತಿದೆ.

Comments

Leave a Reply

Your email address will not be published. Required fields are marked *