ಸಿಲಿಕಾನ್ ಸಿಟಿ ಅಪಾರ್ಟ್‍ಮೆಂಟ್‍ನಲ್ಲಿ ಮೊದಲ ಬಾರಿಗೆ ಬೃಹತ್ ಸೌರಫಲಕ ಯಶಸ್ವಿ ಅಳವಡಿಕೆ

Ashwaththa Narayana

ಬೆಂಗಳೂರು: ನಗರದ ಯಶವಂತಪುರದಲ್ಲಿರುವ ಬ್ರಿಗೇಡ್ ಗೇಟ್ ವೇ ಅಪಾರ್ಟ್‍ಮೆಂಟ್ ನಿವಾಸಿಗಳ ಸಂಘವು ಗ್ರೀನ್ ಇನಿಶಿಯೇಟಿವ್ ಯೋಜನೆ ಯಡಿಯಲ್ಲಿ ಕ್ರಾಂತಿಕಾರಕ ಕಾರ್ಯಕ್ಕೆ ಮುನ್ನುಡಿ ಬರೆದಿದೆ.

ಬೆಂಗಳೂರಿನಲ್ಲಿ ಮೊಟ್ಟ ಮೊದಲ ಬಾರಿ ಬ್ರಿಗೇಡ್ ಗೇಟ್ ವೇ ಅಪಾರ್ಟ್‍ಮೆಂಟ್‍ನ ಮೇಲ್ಛಾವಣಿಯಲ್ಲಿ ರೆನ್ ಎಕ್ಸೆಲ್ ಇಕೊಟೆಕ್ ಸಂಸ್ಥೆಯು ನಿರ್ಮಾಣ ಮಾಡಿರುವ ಬೃಹತ್ ಸೌರ ವಿದ್ಯುತ್ ಸ್ಥಾವರವನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಅವರು ಉದ್ಘಾಟಿಸಿದರು. ಇದನ್ನೂ ಓದಿ:  ಲಖಿಂಪುರ್ ಸಂತ್ರಸ್ತ ಕುಟುಂಬಗಳಿಗೆ ಹಣ ಬೇಕಿಲ್ಲ, ನ್ಯಾಯ ಬೇಕು: ಪ್ರಿಯಾಂಕಾ ಗಾಂಧಿ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜಕ್ಕೆ ಒಳ್ಳೆ ಸಂದೇಶ ಕೊಡುವ ಕೆಲಸ ಬ್ರಿಗೇಡ್ ಗೇಟ್ ವೇ ಜನ ಮಾಡಿಕೊಂಡು ಬಂದಿದ್ದಾರೆ. ಪ್ರಕೃತಿಯನ್ನು ಕಾಪಾಡುವುದು, ನೀರನ್ನು ರೀಸೈಕಲ್, ಕಸವನ್ನು ರೀಸೈಕಲ್ ಮಾಡುತ್ತಿದ್ದಾರೆ. ಅದಲ್ಲದೆ ಕರೆಂಟ್ ಉತ್ಪಾದನೆ ಕೂಡ ಸ್ವಯಂ ಪ್ರಯತ್ನ ಮಾಡುತ್ತಿದ್ದಾರೆ. ಭಾರತದಲ್ಲಿ ಅತೀ ಹೆಚ್ಚು ಕರೆಂಟ್ ಉತ್ಪಾದನೆ ಮಾಡುತ್ತಿರುವ ಅಪಾರ್ಟ್‍ಮೆಂಟ್ ಇದು. ಇಲ್ಲಿ 354.4 ಕಿಲೋ ವ್ಯಾಟ್ ಕರೆಂಟ್ ಉತ್ಪಾದನೆ ಮಾಡುತ್ತಿದ್ದಾರೆ ಎಂದು ಅಪಾರ್ಟ್‍ಮೆಂಟ್ ಜನರ ಕಾರ್ಯವನ್ನು ಶ್ಲಾಘಿಸಿದರು. ಇದನ್ನೂ ಓದಿ: ಬೀದಿ ನಾಯಿಗಳ ಬಗ್ಗೆ ಟ್ವೀಟ್ ಮಾಡಿದ್ರೆ, ಅದು ನಂಗೆ ಅಂದ್ರೆ ಜವಾಬ್ದಾರ ನಾನಲ್ಲ: ಸಿದ್ದಾರ್ಥ್

Ashwaththa Narayana

ಬಳಿಕ ರೆನ್ಎಕ್ಸ್‌ಸೋಲ್ ಇಕೋಟೆಕ್ ಸಂಸ್ಥೆಯ ಮಾಲೀಕರು ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀನಿವಾಸ್ ಕುಮಾರ್, ಬ್ರಿಗೇಡ್ ಗೇಟ್ ವೇ ಅಪಾರ್ಟ್ಮೆಂಟ್ ಮಾಲೀಕರ ಸಂಘದ ಈ ನವೀನ ಮತ್ತು ಸುಸ್ಥಿರ ಅಭಿವೃದ್ಧಿ ಉಪಕ್ರಮದ ಕುರಿತು ಪ್ರತಿಕ್ರಿಯಿಸಿದರು. “ಹಸಿರು ಮೂಲ ಸೌಕರ್ಯವನ್ನು ನಿರ್ಮಿಸಲು ಅಪಾರ್ಟ್‍ಮೆಂಟ್ ಸಂಘದ ಜೊತೆ ಪಾಲುದಾರಿಕೆ ಹೊಂದಿದ್ದಕ್ಕೆ ತಮಗೆ ಸಂತೋಷವಾಗಿದೆ ಮತ್ತು ಈ ಪ್ರಕ್ರಿಯೆಯಲ್ಲಿ ಬೆಂಗಳೂರು ಅಥವಾ ಭಾರತದಲ್ಲಿ ಅಪಾರ್ಟ್‍ಮೆಂಟ್ ಛಾವಣಿಯ ಮೇಲ್ಭಾಗದ ಜಾಗ ಅಥವಾ ವಸತಿ ಮೇಲ್ಛಾವಣಿಯ ಜಾಗವನ್ನು ಹೇಗೆ ಸೋಲಾರ್ ಶಕ್ತಿಯ ಉತ್ಪಾದನೆಗೆ ಉಪಯೋಗಿಸಬಹುದು ಎನ್ನುವುದನ್ನು ಸಾಬೀತು ಮಾಡಿದಂತಾಗಿದೆ ಎಂದರು.

Comments

Leave a Reply

Your email address will not be published. Required fields are marked *