ಕೊರೊನಾ ಕೇಸ್‌ ಹೆಚ್ಚಳ- ಪಶ್ಚಿಮ ಬಂಗಾಳದಲ್ಲಿ ಲಾಕ್‍ಡೌನ್ ಜಾರಿ

LOCKDOWN

ಕೊಲ್ಕತ್ತಾ: ಶಾಲಾ-ಕಾಲೇಜು ಪುನಾರಂಭ, ವ್ಯಾಪಾರ ವಹಿವಾಟು ಚಟುವಟಿಕೆಗಳಿಗೆ ಮುಕ್ತ ಅವಕಾಶ ದೊರೆಯುತ್ತಿದ್ದಂತೆಯೇ ದೇಶದ ಹಲವೆಡೆ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗತೊಡಗಿದೆ. ಪರಿಣಾಮವಾಗಿ ಹಲವೆಡೆ ಲಾಕ್‍ಡೌನ್ ಘೋಷಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಕೋವಿಡ್ ಪ್ರಕರಣಗಳ ಸಂಖ್ಯೆ ಏರುತ್ತಿರುವ ಹಿನ್ನೆಲೆಯಲ್ಲಿ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಸೋನಾಪುರ ಪುರಸಭೆ ಪ್ರದೇಶದಲ್ಲಿ ಮೂರು ದಿನಗಳ ಲಾಕ್‍ಡೌನ್ ವಿಧಿಸಲಾಗಿದೆ. ಸೋನಾಪುರ್‍ನಿಂದ ಪಶ್ಚಿಮ ಬಂಗಾಳ ರಾಜಧಾನಿ ಕೊಲ್ಕತ್ತಾಗೆ ಕೇವಲ 20 ಕಿ.ಮೀ. ಅಂತರವಿದೆ. ಸೋಂಕು ವೇಗವಾಗಿ ಹರಡುವ ಭೀತಿಯಿಂದ ಲಾಕ್‍ಡೌನ್ ಕ್ರಮಕೈಗೊಳ್ಳಲಾಗಿದೆ. ಇದನ್ನೂ ಓದಿ: ಮನೆಯಿಂದ ಹೊರ ಬರುವಂತಿಲ್ಲ – ಮತ್ತೆ ಚೀನಾದಲ್ಲಿ ಕಠಿಣ ಲಾಕ್‍ಡೌನ್ ಜಾರಿ

ಲಾಕ್‍ಡೌನ್ ಅವಧಿಯಲ್ಲಿ ತುರ್ತು ಸೇವೆಗಳಿಗೆ ಮಾತ್ರ ಅನುಮತಿ ಇರುತ್ತದೆ. ಸೋನಾಪುರ್ ಪ್ರದೇಶದಲ್ಲಿ ಒಟ್ಟು 19 ಕಂಟೇನ್‍ಮೆಂಟ್ ಜೋನ್‍ಗಳಿವೆ.

CORONA

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್)ಯು ಬಂಗಾಳ ಸರ್ಕಾರಕ್ಕೆ ಪತ್ರ ಬರೆದಿದ್ದು, ದುರ್ಗಾ ಪೂಜೆ ಹಬ್ಬಗಳ ನಂತರ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದು ಕಳವಳ ವ್ಯಕ್ತಪಡಿಸಿದೆ.

ಹಬ್ಬದಿಂದಾಗಿ ಶೇ. 25ರಷ್ಟು ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದೆ. ಕಳೆದ 24 ಗಂಟೆಗಳಲ್ಲಿ ಕೊಲ್ಕತ್ತಾದಲ್ಲೇ 248 ಹೊಸ ಪ್ರಕರಣಗಳು ದಾಖಲಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಜಿಮ್‍ನತ್ತ ಮುಖ ಮಾಡಿದ ಗೀತಾ ಭಾರತಿ ಭಟ್

“ಕೋವಿಡ್-19 ಲಸಿಕೆಯ ಎರಡೂ ಡೋಸ್ ಪಡೆದ ಹೆಚ್ಚಿನವರಲ್ಲೇ ಕೊರೊನಾ ಸೋಂಕು ದೃಢಪಟ್ಟಿದೆ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ.

LOCKDOWN

ಕೊರೊನಾ ಸೋಂಕು ಹಾಗೂ ಸಾವು ಪ್ರಕರಣಗಳ ಕುರಿತು ಪರಿಶೀಲನೆ ನಡೆಸಬೇಕು. ಜೊತೆಗೆ ಕೋವಿಡ್‍ನಿಂದ ಸುರಕ್ಷಿತವಾಗಿ ಹಬ್ಬಗಳನ್ನು ಆಚರಿಸುವುದಕ್ಕೆ ಕ್ರಮಕೈಗೊಳ್ಳುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕೇಂದ್ರ ಸೂಚನೆ ನೀಡಿದೆ.

Comments

Leave a Reply

Your email address will not be published. Required fields are marked *