ಭಾರತೀಯರಿಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್‌: ವಿಶ್ವದೆಲ್ಲೆಡೆ ಭಾರತೀಯರಲ್ಲಿ ದೀಪಾವಳಿ ಸಂಭ್ರಮ ಮನೆಮಾಡಿದೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ (Joe Biden) ಅವರು ತಮ್ಮ ಮನೆಯಲ್ಲಿ ದೀಪವನ್ನು ಹಚ್ಚುವ ಮೂಲಕ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ (Deepavali Wish) ಕೋರಿದ್ದಾರೆ.

“ದೀಪಾವಳಿಯಲ್ಲಿ ದೀಪ ಹಚ್ಚುವುದು ಕತ್ತಲಿನಿಂದ ಜ್ಞಾನ, ಅರಿವು, ಸತ್ಯದ ಬೆಳಕಿನ ಕಡೆಗೆ ಸಾಗುವ ಸಂಕೇತವಾಗಿದೆ. ವಿಭಜನೆಯಿಂದ ಏಕತೆ, ಹತಾಶೆಯಿಂದ ಭರವಸೆಯೆಡೆಗಿನ ತುಡಿತವಾಗಿದೆ” ಎಂದು ಬೈಡೆನ್‌ ಟ್ವೀಟ್‌ ಮಾಡಿದ್ದಾರೆ. ಇದನ್ನೂ ಓದಿ: ಅಭಿವೃದ್ಧಿಯಾಯ್ತು ಕೋವಿಡ್-19 ಮಾತ್ರೆ; ಮೊದಲ ರಾಷ್ಟ್ರವಾಗಿ ಯುಕೆ ಅನುಮೋದನೆ

ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು ಅಮೆರಿಕ ಹಾಗೂ ವಿಶ್ವದಾದ್ಯಂತ ದೀಪಾವಳಿಯನ್ನು ಸಂಭ್ರಮ, ಸಡಗರದಿಂದ ಆಚರಿಸುತ್ತಿದ್ದಾರೆ. ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೇದಾರನಾಥದಲ್ಲಿ ಶಂಕರಾಚಾರ್ಯ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಭಾರತೀಯರು ದೀಪ ಬೆಳಗಿಸಿ ಸಂಭ್ರಮಿಸುವ ಹಬ್ಬ ದೀಪಾವಳಿ. ಕತ್ತಲಿನಿಂದ ಬೆಳಕಿನೆಡೆಗೆ, ಕೆಡುಕಿನಿಂದ ಒಳಿತಿನೆಡೆಗೆ, ಅಜ್ಞಾನದಿಂದ ಜ್ಞಾನದೆಡೆಗೆ ಸಾಗಿ ಆಧ್ಯಾತ್ಮಿಕ ಗೆಲುವು ಸಾಧಿಸುವ ಸಂಕೇತವಾಗಿ ದೀಪಾವಳಿ ಆಚರಿಸಲಾಗುತ್ತದೆ.

Comments

Leave a Reply

Your email address will not be published. Required fields are marked *