ಮುಂಬರುವ ಚುನಾವಣೆಗೆ ಪಕ್ಷ ಬಲಪಡಿಸುವುದಕ್ಕೆ ಜನ ಸ್ವರಾಜ್ ಯಾತ್ರೆ: ಬಿ.ಸಿ ಪಾಟೀಲ್

– ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದಿದ್ದರೆ, ರಾಜ್ಯವನ್ನೇ ಮಾರಿಬಿಡುತ್ತಿದ್ದರು

ಗದಗ: ಮುಂಬರುವ ಚುನಾವಣೆಗಾಗಿ, ಪಕ್ಷ ಬಲಪಡಿವುದಕ್ಕೆ ಜನ ಸ್ವರಾಜ್ ಯಾತ್ರೆಯಾಗಿದೆ. ಜನ ಸ್ವರಾಜ್ ಯಾತ್ರೆ ಬಗ್ಗೆ ಕಾಂಗ್ರೆಸ್ ಟೀಕೆಗೆ ಕೃಷಿ ಸಚಿವ ಬಿ.ಸಿ ಪಾಟೀಲ್ ತಿರುಗೇಟು ನೀಡಿದ್ದಾರೆ.

ಗದಗ ಜಿಲ್ಲೆ ನರಗುಂದ ತಾಲೂಕಿನಲ್ಲಿ ರೈತರೊಂದಿಗೆ ಒಂದು ದಿನ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ನರಗುಂದ ಪಟ್ಟಣದಲ್ಲಿ ಹುತಾತ್ಮ ರೈತ ವೀರಪ್ಪ ಕಡ್ಲಿಕೊಪ್ಪ ವೀರಗಲ್ಲಿಗೆ ಮಾಲಾರ್ಪಣೆ ಮಾಡಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ 2 ವರ್ಷದಲ್ಲಿ ಕೋವಿಡ್ ನಿಯಂತ್ರಣ ಮಾಡಿದ್ದೇ ಸರ್ಕಾರದ ದೊಡ್ಡ ಸಾಧನೆಯಾಗಿದೆ. ಜೊತೆಗೆ ರಾಜ್ಯದ ಯಾವುದೇ ಅಭಿವೃದ್ಧಿ ಕಾರ್ಯಗಳು ನಿಂತಿಲ್ಲ. ಕಾಂಗ್ರೆಸ್‍ನವರಿಗೆ ಕೇಳಿ ಬಿಜೆಪಿ ಜನ ಸ್ವರಾಜ್ ಕಾರ್ಯಕ್ರಮದ ಮಾಡಬೇಕಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿರುಗೇಟು ನೀಡಿದರು. ಇದನ್ನೂ ಓದಿ: ಅನ್ನ ಸಂತರ್ಪಣೆ ವೇಳೆ ಪುನೀತ್ ನೆನೆದು ಕಣ್ಣೀರಿಟ್ಟ ಅಶ್ವಿನಿ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯ ಪಕ್ಷಗಳು ಜಾಥಾ, ಅಭಿಮಾನ ನಡೆಸುವುದು ಸಾಮಾನ್ಯವಾಗಿದೆ. ಆ ಮೂಲಕ ಮುಂಬರುವ ಚುನಾವಣೆಗೆ ಸಿದ್ಧತೆ ನಡೆಸಲಾಗುತ್ತದೆ. ಅಲ್ಲದೇ ಕೋವಿಡ್ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದಿದ್ದರೆ, ರಾಜ್ಯವನ್ನೇ ಮಾರಿಬಿಡುತ್ತಿದ್ದರು. ಇಲ್ಲವೇ ಹಾದಿ ಬೀದಿಯಲ್ಲೇ ಸಾಲು ಸಾಲು ಹೆಣಗಳು ಬೀಳುತ್ತಿದ್ದವು. ಈ ಹಿಂದೆ 18 ತಿಂಗಳು ಅಧಿಕಾರ ನಡೆಸಿದ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರಕಾರದ ಕೊಡುಗೆ ಏನು ಎಂದು ಕುಟುಕಿದರು. ಮುಂಬರುವ ತಾ.ಪಂ., ಜಿ.ಪಂ. ಚುನಾವಣೆಯಲ್ಲಿ ಮತ ಪೆಟ್ಟಿಗೆ ಮೂಲಕ ಉತ್ತರ ನೀಡುತ್ತೇವೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: 46 ವರ್ಷಕ್ಕೆ ನನ್ನ ತಮ್ಮ ದೇವರಿಗೆ ತುಂಬಾ ಇಷ್ಟ ಆಗ್ಬಿಟ್ಟ: ಶಿವಣ್ಣ

ರಮೇಶ್ ಜಾರಕಿಹೋಳಿಗೆ ಸಚಿವ ಸ್ಥಾನ ಕುರಿತು ಮಾತನಾಡಿದ್ದು, ಯಾರದ್ದೋ ಕುತಂತ್ರದಲ್ಲಿ ಸಿಲುಕಿದ್ದ ರಮೇಶ್ ಜಾರಕಿಹೊಳಿ ಅವರು ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಮುಂದಿನ ದಿನಗಳಲ್ಲಿ ಅವರಿಗೂ ಒಳ್ಳೆಯ ದಿನಗಳು ಬರುತ್ತವೆ ಎಂದರು.

ಮೇಕೆದಾಟು ಯೋಜನೆ ಕೋರ್ಟ್‍ನಲ್ಲಿದ್ದು, ಅಲ್ಲಿ ಕ್ಲಿಯರೆನ್ಸ್ ದೊರಕುತ್ತಿದ್ದಂತೆ ನಾವೇ ಮಾಡುತ್ತೇವೆ. ಈ ಬಗ್ಗೆ ಕಾಂಗ್ರೆಸನವರಿಂದ ಹೇಳಿಸಿಕೊಳ್ಳಬೇಕಿಲ್ಲ. ತಮ್ಮದೇ ಯೋಜನೆ ಎಂದು ಹೇಳಿಕೊಳ್ಳುವ ಕಾಂಗ್ರೆಸ್, ತಮ್ಮ ಅಧಿಕಾರದಲ್ಲಿ ಏಕೆ ಮಾಡಲಿಲ್ಲ ಎಂದು ಲೇವಡಿ ಮಾಡಿದರು. ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಸಂಸದ ಪಿ.ಸಿ.ಗದ್ದಿಗೌಡರ ಮತ್ತಿತರರು ಇದ್ದರು.

Comments

Leave a Reply

Your email address will not be published. Required fields are marked *