ಪವರ್ ಸ್ಟಾರ್ ಮನೆಗೆ ಮುರುಘಾ ಶ್ರೀ ಭೇಟಿ – ಬಸವ ಶ್ರೀ ಪ್ರಶಸ್ತಿ ಪ್ರದಾನಕ್ಕೆ ಅಶ್ವಿನಿಗೆ ಆಹ್ವಾನ

Ashwini Puneeth

ಬೆಂಗಳೂರು: ಚಿತ್ರದುರ್ಗದ ಜಗದ್ಗುರು ಮುರುಘರಾಜೇಂದ್ರ ಬೃಹನಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಇಂದು ಪುನೀತ್‍ರಾಜ್‍ಕುಮಾರ್ ಅವರ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಶ್ರೀಮಠದಿಂದ ಪುನೀತ್‍ರಾಜ್‍ಕುಮಾರ್ ಅವರಿಗೆ ಮರಣೋತ್ತರವಾಗಿ ಪ್ರಕಟಿಸಲಾಗಿರುವ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸುವಂತೆ ಅಶ್ವಿನಿ ಪುನೀತ್ ರಾಜಕುಮಾರ್, ಶಿವರಾಜಕುಮಾರ್ ಮತ್ತು ಕುಟುಂಬ ವರ್ಗದವರಿಗೆ ಅಧಿಕೃತ ಆಹ್ವಾನ ನೀಡಿದರು. ಇದನ್ನೂ ಓದಿ: ಅಪ್ಪು ನಟನೆಯ ಚಿತ್ರದ ಶೀರ್ಷಿಕೆಗಳಲ್ಲೇ ಗೀತೆ ರಚನೆ ಮಾಡಿದ ತಂದೆ, ಜೀವ ತುಂಬಿದ ಮಗಳು

ಶ್ರೀಮಠದ ಆಹ್ವಾನಕ್ಕೆ ಕುಟುಂಬ ವರ್ಗವು ಸಹಮತ ವ್ಯಕ್ತಪಡಿಸಿದೆ. 2022ನೇ ಮೇ ತಿಂಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಸ್ವೀಕರಿಸುವುದಾಗಿ ತಿಳಿಸಿದೆ. ಇದನ್ನೂ ಓದಿ: ಮೈಸೂರಿನ ಚಿತ್ರನಗರಿಗೆ ಪುನೀತ್ ರಾಜ್‍ಕುಮಾರ್ ಹೆಸರಿಡಲು ಚಿಂತನೆ: ಎಸ್‍ಟಿಎಸ್

ಈ ಸಂದರ್ಭದಲ್ಲಿ ನಿರ್ಮಾಪಕ ಚಿನ್ನೇಗೌಡ, ಖನಿಜ ನಿಗಮದ ಅಧ್ಯಕ್ಷ ಎಸ್. ಲಿಂಗಮೂರ್ತಿ, ಪಟೇಲ್ ಶಿವಕುಮಾರ್, ಡಿ.ಎಸ್. ಮಲ್ಲಿಕಾರ್ಜುನ್, ಸಿದ್ಧವ್ವನಹಳ್ಳಿ ಪರಮೇಶ್, ನಗರಸಭೆ ಮಾಜಿ ಅಧ್ಯಕ್ಷ ಕಾಂತರಾಜ್, ವಕೀಲರಾದ ಉಮೇಶ್ ಮೊದಲಾದವರು ಉಪಸ್ಥಿತರಿದ್ದರು.

 

 

 

Comments

Leave a Reply

Your email address will not be published. Required fields are marked *