ಸಂವಿಧಾನ ದಿನವನ್ನು ವಿಶೇಷವಾಗಿ ಆಚರಿಸಲು ಪ್ರಧಾನಿ ಮೋದಿ ಸರ್ಕಾರದಿಂದ ನಿರ್ಧಾರ

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ ಹಿನ್ನಲೆ ಈ ಬಾರಿಯ ಸಂವಿಧಾನ ದಿನವನ್ನು ವಿಶೇಷವಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಿರ್ಧರಿಸಿದೆ. ಈ ಹಿನ್ನಲೆ ನವೆಂಬರ್ 26 ರಂದು ಅದ್ದೂರಿ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿ ಸಂವಿಧಾನ ದಿನ ಆಚರಣೆ ಬಗ್ಗೆ ಮಾಹಿತಿ ನೀಡಿದರು. ನವೆಂಬರ್ 26 ರಂದು ಸಂಸತ್ ಭವನದ ಸೆಂಟ್ರಲ್ ಹಾಲ್‍ನಲ್ಲಿ ಕಾರ್ಯಕ್ರಮ ನಡೆಯಲಿದ್ದು ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚಾಮುಂಡಿ ಬೆಟ್ಟವನ್ನು ಕಾಂಕ್ರೀಟ್ ಕಾಡು ಮಾಡಬೇಡಿ – ಮೋದಿಗೆ ಪತ್ರ ಬರೆದ ಭೈರಪ್ಪ

ಕಾರ್ಯಕ್ರಮದಲ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿ, ಲೋಕಸಭೆ ಸ್ಪೀಕರ್ ಸಂವಿಧಾನದ ಮಹತ್ವದ ಬಗ್ಗೆ ಮಾತನಾಡಲಿದ್ದು ಇದೇ ವೇಳೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂವಿಧಾನದ ಪೀಠಿಕೆ ಓದಲಿದ್ದಾರೆ. ಇನ್ನು ಸಂವಿಧಾನದ ಓದು ಕಾರ್ಯಕ್ರಮದಲ್ಲಿ ಜನರನ್ನು ಭಾಗಿ ಮಾಡಲು ನಿರ್ಧರಿಸಿದ್ದು ಇದಕ್ಕಾಗಿ ಎರಡು ಆ್ಯಪ್‍ಗಳನ್ನು ನಿರ್ಮಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ನೇತೃತ್ವದಲ್ಲಿ ಇದರ ಪ್ರಚಾರ ನಡೆಯಲಿದ್ದು ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆ ಓದಲಿದ್ದಾರೆ ಮತ್ತು ಇನ್ನು ಆ್ಯಪ್‍ಗಳಲ್ಲಿ 22 ಭಾಷೆಗಳಲ್ಲಿ ಸಂವಿಧಾನದ ಪೀಠಿಕೆ ಇರಲಿದ್ದು, ಅದನ್ನು ಓದಿ ವೆಬ್‍ಸೈಟ್‍ಗೆ ಅಪ್ಲೋಡ್ ಮಾಡಿ ಸರ್ಟಿಫಿಕೇಟ್ ಪಡೆಯಬಹುದಾಗಿದೆ. ಇದನ್ನೂ ಓದಿ: ಪ್ರಾಣವನ್ನೇ ಪಣಕ್ಕಿಟ್ಟು ಅರ್ಚಕನನ್ನು ರಕ್ಷಿಸಿದ ಟ್ರಾಫಿಕ್ ಪೊಲೀಸ್ – ವೀಡಿಯೋ ವೈರಲ್

ಇನ್ನೂ ವೆಬ್‍ನಲ್ಲಿ ಸಂವಿಧಾನದ ಬಗ್ಗೆ ರಸಪ್ರಶ್ನೆ ಕಾರ್ಯಕ್ರಮ ನಡೆಯಲಿದ್ದು ಸಾವಿರಕ್ಕೂ ಅಧಿಕ ಪ್ರಶ್ನೆಗಳು ಇರಲಿದೆ. ಇದರಲ್ಲೂ ಜನರೂ ಭಾಗಿಯಾಗಿ ಉತ್ತರಿಸಬಹುದು. ಸಂವಿಧಾನದ ರಚನೆ ಮತ್ತು ಮೂಲಭೂತ ಹಕ್ಕುಗಳ ಬಗ್ಗೆ ಹೆಚ್ಚು ಪ್ರಶ್ನೆಗಳಿರಲಿದ್ದು ಸರಿಯಾದ ಉತ್ತರ ನೀಡದವರಿಗೆ ಸರ್ಟಿಫಿಕೇಟ್ ಕೂಡ ಸಿಗಲಿದೆ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

Comments

Leave a Reply

Your email address will not be published. Required fields are marked *