ನಿಮ್ಮಿಂದ ಸ್ವಲ್ಪ ದೂರ ಹೋಗ್ತಿದ್ದೇನೆ, ಆದ್ರೆ ಬೇಗ ವಾಪಸ್ಸಾಗ್ತೀನಿ- ವಿದೇಶಕ್ಕೆ ಹಾರಿದ ರಶ್ಮಿಕಾ

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿಯರಲ್ಲಿ ರಶ್ಮಿಕಾ ಮಂದಣ್ಣ ಕೂಡ ಒಬ್ಬರು. ಸದ್ಯ ಮೂರು ಸಿನಿಮಾಗಳಲ್ಲಿ ಅವರು ಬ್ಯುಸಿಯಾಗಿದ್ದಾರೆ. ಇದರ ಮಧ್ಯೆಯೂ ಸಿನಿಮಾ ಕೆಲಸಗಳಿಂದ ಬ್ರೇಕ್‌ ಪಡೆದು ವಿದೇಶಕ್ಕೆ ಹಾರಿದ್ದಾರೆ.

ತಾನು ವಿದೇಶಕ್ಕೆ ತೆರಳುತ್ತಿರುವುದಕ್ಕೆ ಸಂಬಂಧಿಸಿದಂತೆ ಪಾಸ್‌ಪೋರ್ಟ್‌ ಇರುವ ಫೋಟೊವೊಂದನ್ನು ಇನ್‌ಸ್ಟಾಗ್ರಾಂನಲ್ಲಿ ನಟಿ ರಶ್ಮಿಕಾ ಪೋಸ್ಟ್‌ ಹಾಕಿದ್ದಾರೆ. “ನಾನು ಎಲ್ಲಿಗೆ ಹೋಗುತ್ತಿದ್ದೇನೆ ಊಹಿಸಿ” ಎಂದು ಅಭಿಮಾನಿಗಳನ್ನು ಪ್ರಶ್ನಿಸುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಇದನ್ನೂ ಓದಿ: ನಾವು ನಿಮ್ಮನ್ನು ಹತ್ಯೆ ಮಾಡುತ್ತೇವೆ – ಗಂಭೀರ್‌ಗೆ ಐಸಿಸ್ ಕಾಶ್ಮೀರದಿಂದ ಜೀವ ಬೆದರಿಕೆ

ಅಷ್ಟೇ ಅಲ್ಲದೇ “ಈ ಬಾರಿ ನಿಮ್ಮಿಂದ ದೂರ ಹೋಗುತ್ತಿದ್ದೇನೆ. ಆದರೆ ಬೇಗನೇ ವಾಪಸ್ಸಾಗುತ್ತೇನೆ” ಎಂದು ತಾವು ವಿದೇಶಕ್ಕೆ ಹೋಗುತ್ತಿರುವ ಬಗ್ಗೆ ಹೇಳಿಕೊಂಡಿದ್ದಾರೆ.

ರಶ್ಮಿಕಾ ಅವರು ಅಮೆರಿಕಗೆ ತೆರಳುತ್ತಿರುವ ಬಗ್ಗೆ ವರದಿಯಾಗಿದೆ. ಅವರ ಸಹ ನಟ ವಿಜಯ್‌ ದೇವರ ಕೊಂಡ ಅವರು ಸದ್ಯ ಅಮೆರಿಕದಲ್ಲಿ ʼಲೈಗರ್‌ʼ ಸಿನಿಮಾ ಶೂಟಿಂಗ್‌ನಲ್ಲಿದ್ದಾರೆ. ಅವರನ್ನು ಭೇಟಿಯಾಗಲು ರಶ್ಮಿಕಾ ತೆರಳುತ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಮದುವೆಗೆ ವರ ಗೈರು – ಮನೆ ಮುಂದೆ ಧರಣಿ ಕುಳಿತ ವಧು

ರಶ್ಮಿಕಾ ಮಂದಣ್ಣ ಹಾಗೂ ವಿಜಯ ದೇವರಕೊಂಡ ಇಬ್ಬರೂ ಗೀತಾ ಗೋವಿಂದಮ್‌, ಡಿಯರ್‌ ಕಾಮ್ರೆಡ್‌ ಸಿನಿಮಾಗಳಲ್ಲಿ ಅಭಿನಯಿಸಿದ್ದು, ನಂತರ ಆತ್ಮೀಯ ಸ್ನೇಹಿತರಾಗಿದ್ದಾರೆ. ಅವರ ಒಡನಾಟದ ಬಗ್ಗೆ ಸಾಕಷ್ಟು ಊಹಾಪೋಹಗಳು ಇದ್ದವು. ಆದರೆ ನಾವಿಬ್ಬರೂ ಸ್ನೇಹಿತರಷ್ಟೇ ಬೇರೆನು ಇಲ್ಲ ಎಂದು ಅವರಿಬ್ಬರು ಸ್ಪಷ್ಟನೆ ನೀಡಿದ್ದರು.

ರಶ್ಮಿಕಾ ನಟನೆಯ ಪುಷ್ಪ ಸಿನಿಮಾ ಡಿ.17ರಂದು ತೆರೆ ಕಾಣಲಿದೆ. ಹಿಂದಿ ಭಾಷೆಯ ಮಿಷನ್‌ ಮಜ್ನು ಹಾಗೂ ಗುಡ್‌ ಬೈ ಸಿನಿಮಾ ಕೆಲಸಗಳು ಕೂಡ ಬಹುತೇಕ ಪೂರ್ಣಗೊಂಡಿವೆ. ಇದರ ಮಧ್ಯೆಯೇ ರಶ್ಮಿಕಾ ಅವರು ವಿದೇಶಕ್ಕೆ ಹಾರಿದ್ದಾರೆ.

Comments

Leave a Reply

Your email address will not be published. Required fields are marked *