ಭಾರತದಲ್ಲಿ ಹೆಣ್ಣು ಮಕ್ಕಳಿಗೆ ಮರ್ಯಾದೆ ಕೊಡಬೇಕು – ರಮೇಶ್‍ಗೆ ಹೆಬ್ಬಾಳ್ಕರ್ ಟಾಂಗ್

ಚಿಕ್ಕೋಡಿ(ಬೆಳಗಾವಿ): ಕರ್ನಾಟಕವನ್ನು ಕನ್ನಡಾಂಬೆ ಎಂದು ಕರೆಯುತ್ತೇವೆ. ಆದರೆ ಎರಡು ದಿನಗಳ ಹಿಂದೆ ಹೆಣ್ಣು ಮಕ್ಕಳಿಗೆ ಯಾವ ರೀತಿ ಥೂ ಥೂ..ಎನ್ನುತ್ತಿದ್ದಾರೆ ಎಂದು ಹೇಳುವ ಮೂಲಕ ರಮೇಶ್ ಜಾರಕಿಹೊಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಟಾಂಗ್ ಕೊಟ್ಟಿದ್ದಾರೆ.

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ರಾಯಬಾಗ ಮಹಾವೀರ ಭವನದಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯೋಜನೆ ಮಾಡಿದ್ದ ಪ್ರಚಾರ ಸಭೆಯ ವೇದಿಕೆ ಭಾಷಣದಲ್ಲಿ ಹೆಬ್ಬಾಳ್ಕರ್ ಮಾತನಾಡಿದರು. ಕಳೆದ ಎರಡು ದಿನಗಳ ಹಿಂದೆ ರಮೇಶ್ ಜಾರಕಿಹೊಳಿ ಅವರು ಲಕ್ಷ್ಮಿ ಹೆಸರು ಪ್ರಸ್ತಾಪಿಸುತ್ತಿದ್ದಂತೆ ಥೂ ಥೂ…..ಎಂದಿದ್ದರು. ಇದೀಗ ಹೆಬ್ಬಾಳ್ಕರ್ ಅವರು ತಮ್ಮ ಭಾಷಣದಲ್ಲಿ ರಮೇಶ್ ಜಾರಕಿಹೊಳಿ ಹೆಸರನ್ನು ಪ್ರಸ್ತಾಪ ಮಾಡದೇ ಟಾಂಗ್ ಕೊಟ್ಟರು.

ಭಾರತ ದೇಶದಲ್ಲಿ ಹಣ್ಣುಮಕ್ಕಳಿಗೆ ಮರ್ಯಾದೆ ಕೊಡಬೇಕು. ಭಾರತ ದೇಶದ ಹೆಸರು ಕೂಡ ಒಬ್ಬ ಹೆಣ್ಣುಮಗಳ ಹೆಸರಾಗಿದೆ. ಕರ್ನಾಟಕವನ್ನು ಕನ್ನಡಾಂಬೆ ಎಂದು ಕರೆಯುತ್ತೇವೆ. ಆದರೆ ತಾವೇ ನೋಡಿದ್ದೀರಿ ಹೆಣ್ಣು ಮಕ್ಕಳಿಗೆ ಯಾವ ರೀತಿ ಥೂ ಥೂ…ಎನ್ನುತ್ತಿದ್ದಾರೆ ಎಂದು ಗರಂ ಆದರು. ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಥೂ ಥೂ ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಸಮಯವಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

ಇದೇ ವೇಳೆ ಪರಿಷತ್ ಚುನಾವಣೆಯಲ್ಲಿ ಯಾವುದೇ ರೀತಿಯ ಆಸೆ ಆಮಿಷಗಳಿಗೆ ಬಲಿಯಾಗದೆ ನನ್ನ ಸಹೋದರನಿಗೆ ಒಂದು ಅವಕಾಶ ಕೊಡಿ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಮನವಿ ಮಾಡಿಕೊಂಡರು.

Comments

Leave a Reply

Your email address will not be published. Required fields are marked *