ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ – ಆರೋಪಿ ಬಂಧನ

ಕಾರವಾರ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದೆ.

ಮೂಲತಹಾ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಮೌಲಾಲಿ ದಾದೆ ಅಲಿ ಖಾನ್(26) ಬಂಧಿತ ಆರೋಪಿಯಾಗಿದ್ದು ಈತನು ಅಪ್ರಾಪ್ತ ಬಾಲಕಿಯನ್ನು ಪರಿಚಯ ಮಾಡಿಕೊಂಡು ನಿನ್ನ ಜೊತೆ ಮಾತನಾಡುವುದಿದೆ ಎಂದು ನಂಬಿಸಿ ಶಿರಸಿಯ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಆಕೆಯೊಂದಿಗೆ ಅಸಭ್ಯ ವರ್ತನೆ ತೊರಿ ಲೈಂಗಿಕ ಕಿರುಕುಳ ನೀಡಿದ್ದು, ಆ ಸಮಯಕ್ಕೆ ಸ್ಥಳಕ್ಕೆ ಬಾಲಕಿಯ ತಂದೆ ಬಂದ ನಂತರ ಪರಾರಿಯಾಗಿದ್ದ. ಇದನ್ನೂ ಓದಿ: ಕರ್ನಾಟಕ ರತ್ನ ಅಪ್ಪು ಅಗಲಿ ನಾಳೆಗೆ 1 ತಿಂಗಳು- ಸಮಾಧಿಗೆ ಕುಟುಂಬಸ್ಥರಿಂದ ಪೂಜೆ

ಈ ಸಂಬಂಧ ಆರೋಪಿ ವಿರುದ್ಧ ಶಿರಸಿ ಠಾಣೆಯಲ್ಲಿ ಬಾಲಕಿ ತಂದೆ ದೂರು ನೀಡಿದ್ದು ಆರೋಪಿಯನ್ನು ಶಿರಸಿ ಠಾಣೆ ಪೊಲೀಸರು ಪೋಕ್ಸೋ ಮತ್ತು ದೌರ್ಜನ್ಯ ತಡೆ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಇದನ್ನೂ ಓದಿ: ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ದೇಶ ಅಚ್ಚರಿ ಪಡುವಂತೆ ಅಭಿವೃದ್ಧಿ ಹೊಂದುತ್ತದೆ: ಬಿಎಸ್‍ವೈ

Comments

Leave a Reply

Your email address will not be published. Required fields are marked *