ಚರ್ಚೆಯಿಲ್ಲದೆ ಉಭಯ ಸದನಗಳಲ್ಲಿ ಕೃಷಿ ಕಾಯ್ದೆ ರದ್ದುಗೊಳಿಸಿರುವುದು ದುರಾದೃಷ್ಟಕರ ಸಂಗತಿ: ರಾಹುಲ್ ಗಾಂಧಿ

ನವದೆಹಲಿ: ಚರ್ಚೆಯಿಲ್ಲದೆ ಕೃಷಿ ಕಾನೂನುಗಳ ರದ್ದುಗೊಳಿಸಿರುವುದು ದುರಾದೃಷ್ಟಕರ ಸಂಗತಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚರ್ಚೆಯಿಲ್ಲದೆ ಉಭಯ ಸದನಗಳಲ್ಲಿ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿರುವುದು ದುರಾದೃಷ್ಟಕರ ಸಂಗತಿಯಾಗಿದೆ. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈ ನಿರ್ಧಾರಗಳನ್ನು ತೆಗೆದುಕೊಂಡಿರಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ:  ಯಾದಗಿರಿಯಲ್ಲಿ ಪೊಲೀಸರ ದೌರ್ಜನ್ಯಕ್ಕೆ ಬಡ ಜೀವ ಬಲಿ

ಕೇಂದ್ರ ಸರ್ಕಾರ ವಿವಾದಿತ ಮೂರು ಕೃಷಿ ಮಸೂದೆಗಳನ್ನು ಹಿಂಪಡೆಯಲಿದೆ ಎಂದು ಈ ಹಿಂದೆಯೇ ನಾನು ಹೇಳಿದ್ದೆ. ಅದೇ ರೀತಿ ಕಾಯ್ದೆಯನ್ನು ರದ್ದುಪಡಿಸಿದೆ. ಆದರೆ ಚರ್ಚೆಯಿಲ್ಲದೆ ಕಾಯ್ದೆ ಹಿಂಪಡೆದುಕೊಂಡಿರುವುದು ದುರಾದೃಷ್ಟಕರ ಸಂಗತಿಯಾಗಿದೆ. ಚರ್ಚೆ ನಡೆಸಲು ಸರ್ಕಾರಕ್ಕೆ ಭಯವಿದೆ. ರೈತರು ಪ್ರತಿನಿಧಿಸುವ ಭಾರತೀಯ ಜನರ ಬಲವನ್ನು ಎದುರಿಸಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗಲಿಲ್ಲ. ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ ಎಂದಿದ್ದಾರೆ. ಇದನ್ನೂ ಓದಿ: ಸಿಎಂ ಬಸವರಾಜ ಬೊಮ್ಮಾಯಿಯವರಿಂದ ಉತ್ತಮ ಕಾರ್ಯ ನಿರ್ವಹಣೆ: ನಿರಾಣಿ ಹೇಳಿಕೆ

Comments

Leave a Reply

Your email address will not be published. Required fields are marked *