ಶಾಲಾ, ಕಾಲೇಜುಗಳಲ್ಲಿ ಸೂಕ್ತ ಕ್ರಮ, ಆತಂಕ ಪಡುವ ಅಗತ್ಯವಿಲ್ಲ: ನಾಗೇಶ್

ತುಮಕೂರು: ಕೋವಿಡ್ ಮೂರನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಶಾಲೆ-ಕಾಲೇಜುಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ಮತ್ತು ಚಾಮರಾಜನಗರಗಳಲ್ಲಿ ವಿಶೇಷ ಗಮನ ಹರಿಸಿದ್ದು, ಅಲ್ಲಿ ಯಾವುದೇ ಪಾಸಿಟಿವ್ ಪ್ರಕರಣ ಕಂಡುಬಂದಿಲ್ಲ. ಹಾಗಾಗಿ ಪೋಷಕರು ಆತಂಕಪಡುವ ಅಗತ್ಯ ಇಲ್ಲ ಎಂದು ಪ್ರತಿಕ್ರಿಯಿಸಿದರು.

ರಾಜ್ಯದ ಎರಡು ಮೂರು ಶಾಲಾ ಕಾಲೇಜುಗಳಲ್ಲಷ್ಟೇ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ಧಾರವಾಡದ ಎಸ್‍ಡಿಎಮ್ ಕಾಲೇಜು, ಬೆಂಗಳೂರಿನ ಒಂದು ಶಾಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಿದ್ದರೆ ಮೈಸೂರಿನ ಪಿಯು ಕಾಲೇಜಿನಲ್ಲಿ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ. ಉಳಿದಂತೆ ಯಾರಿಗೂ ಪಾಸಿಟಿವ್ ಬಂದಿಲ್ಲ ಎಂದು ಹೇಳಿದರು.

ಕೊರೊನಾ ಕುರಿತಾಗಿ ಸಿಎಂ ನೇತೃತ್ವದಲ್ಲಿ ಸಭೆ ನಡೆದಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಹಾಗಾಗಿ ಪೋಷಕರಿಗೆ ಯಾವುದೇ ರೀತಿಯ ಆತಂಕ ಬೇಡ. ಪ್ರತಿ ಅರ್ಧ ಗಂಟೆಗೊಮ್ಮೆ ಶಾಲೆಗಳಿಂದ ಮಾಹಿತಿ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ. ಶಾಲಾ ಅವಧಿಯಲ್ಲಿ ಸಂಪೂರ್ಣ ಮಾಸ್ಕ್ ಧರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಸಿಎಂ ಬಸವರಾಜ ಬೊಮ್ಮಾಯಿಯವರಿಂದ ಉತ್ತಮ ಕಾರ್ಯ ನಿರ್ವಹಣೆ: ನಿರಾಣಿ ಹೇಳಿಕೆ

ತಾಂತ್ರಿಕ ಸಲಹಾ ಸಮಿತಿ ಸಲಹೆ ಮೇರೆಗೆ ಮುಂದೆ ಏನಾದರೂ ಕ್ರಮ ಕೈಗೊಳ್ಳಬೇಕಾದರೆ ತೆಗದುಕೊಳ್ಳುತ್ತೇವೆ. ಹಾಗೆಯೇ ಕೇರಳದಿಂದ ಬರುವವರ ಮೇಲೆ ಸಂಪೂರ್ಣ ನಿಗಾ ವಹಿಸಲಾಗಿದೆ. ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ನಡೆದಿಲ್ಲ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ:  ಯಾದಗಿರಿಯಲ್ಲಿ ಪೊಲೀಸರ ದೌರ್ಜನ್ಯಕ್ಕೆ ಬಡ ಜೀವ ಬಲಿ

ಮಂಗಳೂರು ಭಾಗದಲ್ಲೂ ವಿಶೇಷವಾಗಿ ನಿಗಾವಹಿಸಲಾಗಿದೆ. ಆ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಪಾಸಿಟಿವ್ ಬಂದಿಲ್ಲ ಎಂದು ತಿಳಿಸಿದರು.

Comments

Leave a Reply

Your email address will not be published. Required fields are marked *