ಅಪ್ಪು ಕನಸಿನ ಯೋಜನೆ, ವನ್ಯಜೀವಿ ಆಧಾರಿತ ಚಿತ್ರ ‘ಗಂಧದ ಗುಡಿ’ಯ ಟೀಸರ್ ಡಿಸೆಂಬರ್ 6ಕ್ಕೆ ರಿಲೀಸ್

ಬೆಂಗಳೂರು: ಪುನೀತ್ ರಾಜ್‍ಕುಮಾರ್ ಕನಸು ನನಸಾಗ್ತಿದೆ. ಅಪ್ಪು ಕನಸಿನ ಯೋಜನೆ, ವನ್ಯಜೀವಿ ಆಧಾರಿತ ಚಿತ್ರ `ಗಂಧದ ಗುಡಿ’ಯ ಟೀಸರ್ ಇದೇ 6ಕ್ಕೆ ರಿಲೀಸ್ ಆಗಲಿದೆ.

ಈ ಕಾರ್ಯಕ್ರಮ ಹಿನ್ನೆಲೆಯಲ್ಲಿ ನಟ ಶಿವರಾಜ್‍ಕುಮಾರ್ ದಂಪತಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಆಹ್ವಾನ ನೀಡಿದರು. ಅಪ್ಪು ಅಗಲಿಕೆ ಆಗದಿದ್ದರೆ ನವೆಂಬರ್ 1 ರಂದು `ಗಂಧದಗುಡಿ’ ಟೀಸರ್ ರಿಲೀಸ್ ಆಗಬೇಕಿತ್ತು. ಅಪ್ಪು ಅಗಲಿದ್ದರೂ ಕೂಡ ಅವರ ಕನಸಿನ ಯೋಜನೆಗಳು ಮುಂದುವರಿಯುತ್ತವೆ ಎಂದು ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಕೆಲ ದಿನಗಳ ಹಿಂದೆ ಘೋಷಿಸಿದ್ದರು.

ಅಪ್ಪು ಅವರ ಕನಸೊಂದು 2021 ದಿಸೆಂಬರ್ 1ರಂದು ಬೆಳಕಿಗೆ ಬರಬೇಕಿತ್ತು. ಆದರೆ ಆ ಕನಸಿಗಿದು ಅಲ್ಪವಿರಾಮವಷ್ಟೇಯಾಗಿದೆ. ಅದನ್ನು ಅವರಿಷ್ಟದಂತೆಯೇ ನಿಮ್ಮೆದುರು ನನಸಾಗಿಸುವ ಜವಾಬ್ದಾರಿ ನಮ್ಮದು. ಇಲ್ಲಿಯವರೆಗೆ ನೀವು ತೋರಿಸಿದ ಸಂಯಮ ಮತ್ತು ಸಹಕಾರಕ್ಕೆ ನಾವು ಆಭಾರಿಯಾಗಿದ್ದೇವೆ ಎಂದು ಬರೆದುಕೊಂಡು ಇನ್‍ಸ್ಟಾಗ್ರಾಮ್‍ನಲ್ಲಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಕೆಲಿನಗಳ ಹಿಂದೆ ಪೋಸ್ಟ್ ಮಾಡಿದ್ದರು.

ಡಾಕ್ಯುಮೆಂಟರಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದಂದು ಬಿಡುಗಡೆಯಾಗಬೇಕಿತ್ತು. ಈ ಬಗ್ಗೆ ಪುನೀತ್, ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ’ ಎಂದಷ್ಟೇ ನೇತ್ರಾಣಿಯಲ್ಲಿ ಮಾಡಿದ ಸ್ಕೂಬಾ ಡೈವಿಂಗ್‍ನ ಫೋಟೊವೊಂದರ ಜೊತೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಡಾಕ್ಯಮೆಂಟರಿ ಬಿಡುಗಡೆಯ ಸುಳಿವು ನೀಡಿದ್ದರು.

Comments

Leave a Reply

Your email address will not be published. Required fields are marked *